ಕರ್ನಾಟಕ

karnataka

ETV Bharat / state

ಚೆನ್ನೈ ಆಸ್ಪತ್ರೆಗೆ ದಾಖಲಾದ ಡೆಪ್ಯೂಟಿ ಸ್ಪೀಕರ್ ಆನಂದ್ ಮಾಮನಿ - ಈಟಿವಿ ಭಾರತ್ ಕನ್ನಡ

ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ್ ಮಾಮನಿ ಕುತ್ತಿಗೆ ನೋವಿನಿಂದ ಬಳಲುತ್ತಿದ್ದು, ಚೆನ್ನೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಡೆಪ್ಯೂಟಿ ಸ್ಪೀಕರ್ ಆನಂದ್ ಮಾಮನಿ
ಡೆಪ್ಯೂಟಿ ಸ್ಪೀಕರ್ ಆನಂದ್ ಮಾಮನಿ

By

Published : Sep 15, 2022, 7:19 AM IST

ಬೆಂಗಳೂರು:ಕುತ್ತಿಗೆ ನೋವಿನಿಂದ ಬಳಲುತ್ತಿರುವ ವಿಧಾನಸಭೆ ಉಪ ಸಭಾಧ್ಯಕ್ಷ ಆನಂದ್ ಮಾಮನಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಈ ಸಮಸ್ಯೆಯಿಂದ ಬಳಲುತ್ತಿರುವ ಇವರಿಗೆ ಇದೀಗ ನೋವು ಉಲ್ಬಣಗೊಂಡಿದೆ. ಕುತ್ತಿಗೆ ನೋವು ಹೊರತುಪಡಿಸಿ ಇತರ ಯಾವುದೇ ರೀತಿಯ ಆರೋಗ್ಯ ಸಮಸ್ಯೆ ಇಲ್ಲ. ಹಾಗಾಗಿ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

ವಿಧಾನಸಭೆ ಅಧಿವೇಶನ ನಡೆಯುತ್ತಿದೆ. ಆನಂದ ಮಾಮನಿ ಅವರ ಗೈರು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿತ್ತು. ಆರೋಗ್ಯದ ಕುರಿತು ಕೆಲವು ಊಹಾಪೋಹದ ಸುದ್ದಿಗಳು ಹರಿದಾಡಿದ್ದವು. ಇದರ ನಡುವೆ ಸಿಎಂ ಬಸವರಾಜ ಬೊಮ್ಮಾಯಿ‌ ದೂರವಾಣಿ ಕರೆ ಮಾಡಿ ಮಾಮನಿ ಜೊತೆ ಮಾತುಕತೆ ನಡೆಸಿ ಯೋಗಕ್ಷೇಮ ವಿಚಾರಿಸಿದ್ದರು. ಗುರುವಾರ ಮಾಮನಿ ಅವರು ತಮ್ಮ ಆರೋಗ್ಯದ ಬಗ್ಗೆ ವಿಡಿಯೋ ಸಂದೇಶ ನೀಡಿ ಮಾಹಿತಿ ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಇನ್ನೆರಡು ಮೂರು ದಿನದಲ್ಲಿ ಬೆಂಗಳೂರಿಗೆ ಆಗಮಿಸಲಿದ್ದು, ಅಗತ್ಯವಿದ್ದರೆ ಬೆಂಗಳೂರಿನಲ್ಲೇ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕೊಳಚೆ ನೀರು ಕೆರೆಗೆ ಹರಿಯುವ ಬಗ್ಗೆ ಆಕ್ಷೇಪ: ಸಚಿವ ಮಾಧುಸ್ವಾಮಿ ವಿರುದ್ಧ ಲಿಂಬಾವಳಿ ಗರಂ

ABOUT THE AUTHOR

...view details