ಹೊಸಕೋಟೆ:ಸುಧಾಮೂರ್ತಿಯವರ ಬಗ್ಗೆ ಅವಹೇಳನಕಾರಿ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಿರುವ ಮಾನವ ಹಕ್ಕುಗಳ ಸಮಿತಿ, ನಿರ್ದೇಶಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಕಮಿಷನರ್ಗೆ ಮನವಿ ಮಾಡಲಾಗಿದೆ.
ಸುಧಾಮೂರ್ತಿ ವಿರುದ್ಧ ಅವಹೇಳನಕಾರಿ ವಿಡಿಯೋ ಆರೋಪ: ಕ್ರಮಕ್ಕೆ ಆಗ್ರಹ - Latest News Update
ಇಪ್ಫೋಸಿಸ್ ಪ್ರತಿಷ್ಠಾಣದ ಅಧ್ಯಕ್ಷೆ ಸುಧಾಮೂರ್ತಿಯವರ ಬಗ್ಗೆ ಅವಹೇಳನಕಾರಿ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದಾರೆ ಎಂದು ಆರೋಪಿಸಿರುವ ಮಾನವ ಹಕ್ಕುಗಳ ಸಮಿತಿ, ಓಲ್ಡ್ ಟೌನ್ ಕ್ರಿಮಿನಲ್ಸ್ ವೆಬ್ ಸಿರೀಸ್ ನಿರ್ದೇಶಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದೆ.
ಸುಧಾಮೂರ್ತಿ ವಿರುದ್ಧ ಅವಹೇಳನಕಾರಿ ವಿಡಿಯೋ: ಕ್ರಮಕ್ಕೆ ಆಗ್ರಹ
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ತಮ್ಮ ಸಂಸ್ಥೆಯ ಮೂಲಕ ಲಕ್ಷಾಂತರ ಜನರಿಗೆ ನೆರವಾಗಿದ್ದಾರೆ. ಅಂತಹವರ ಬಗ್ಗೆ ನಿರ್ದೇಶಕ ಅಮರ್, ಓಲ್ಡ್ ಟೌನ್ ಕ್ರಿಮಿನಲ್ಸ್(ವೆಬ್ ಸಿರೀಸ್) ಎಂಬ ಸಾಕ್ಷ್ಯ ಚಿತ್ರದಲ್ಲಿ ಅವಹೇಳನ ಮಾಡಿ ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಈ ಸಂಬಂಧ ವೆಬ್ ಸಿರೀಸ್ ನಿರ್ದೇಶಕನ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ರು.
ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಜಾಗೃತಿ ಸಮಿತಿಯ ರಾಜ್ಯಾಧ್ಯಕ್ಷ ವಿಶ್ವನಾಥ್ ಹಾಗೂ ಸಮಿತಿ ಸದಸ್ಯರು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ರು.