ಬೆಂಗಳೂರು: ಬಿಜೆಪಿ ಮುಖಂಡ ಅನಂತರಾಜು ಆತ್ಮಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಅನಂತರಾಜು ಸಾವಿಗೂ ಮುನ್ನ ಬರೆದಿದ್ದರೆನ್ನಲಾದ ಡೆತ್ನೋಟ್ ಸದ್ಯ ರಿವಿಲ್ ಆಗಿದೆ. ಪೊಲೀಸ್ ಇನ್‌ಸ್ಪೆಕ್ಟರ್ ಮತ್ತು ಪತ್ನಿ ಸುಮಾಗೆ ಎರಡು ಪುಟದ ಪತ್ರ ಬರೆದು ಅನಂತರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
'ಕೆ.ಆರ್. ಪುರಂ ನ ಹೆಣ್ಣಿನ ಜಾಲಕ್ಕೆ ಸಿಲುಕಿ ಎಲ್ಲವನ್ನೂ ಕಳೆದುಕೊಂಡಿದ್ದೇನೆ. ಸಾಕಷ್ಟು ಹಣ ಕಳೆದುಕೊಂಡಿದ್ದೇನೆ. ಅವಳಿಂದ ಮಾನಸಿಕ ಹಿಂಸೆ ಅನುಭವಿಸಿದ್ದು, ಅವಳ ಮೇಲೆ ಕಾನೂನು ಕ್ರಮ ಕೈಗೊಳ್ಳಿ' ಎಂದು ಇನ್‌ಸ್ಪೆಕ್ಟರ್ ಹೆಸರಿಗೆ ಅನಂತರಾಜು ಬರೆದಿದ್ದರು ಎನ್ನಲಾದ ಪತ್ರ ಬಹಿರಂಗವಾಗಿದೆ.