ಬೆಂಗಳೂರು: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಂಗಳೂರು ಸಿಸಿಬಿ ಕಾರ್ಯಾಚರಣೆ: ಐಪಿಲ್ ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಯ ಬಂಧನ - Bangalore CCB Police
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿ 30,00,500 ರೂ. ನಗದು ವಶಪಡಿಸಿಕೊಂಡಿದ್ದಾರೆ.
ಸಂತೋಷ್ ಬಂಧಿತ ಆರೋಪಿ. ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕನಕಪುರ ಮುಖ್ಯ ರಸ್ತೆಯ ಪೆಟ್ರೋಲ್ ಬಂಕ್ ಬಳಿ ಆರೋಪಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಕ್ರಿಕೆಟ್ ಪಂದ್ಯಕ್ಕೆ ಬೆಟ್ಟಿಂಗ್ ನಡೆಸುತ್ತಿದ್ದ. lotusbooks 247.com, king exchange.com ಹಾಗೂ playwin 99.com ಎಂಬ ಆ್ಯಪ್ ವೆಬ್ಸೈಟ್ ಮೂಲಕ ಬೆಟ್ಟಿಂಗ್ ಆಡುತ್ತಿದ್ದರು.
ಸದ್ಯ ಬಂಧಿತ ಆರೋಪಿಯಿಂದ ಸುಮಾರು 30,00,500 ರೂ. ನಗದು, ಎರಡು ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇತರೆ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.