ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ನಗರದಲ್ಲಿ ವಾಸವಿದ್ದ ಕುಟುಂಬಗಳು ಊರಿಗೆ ಹೋಗಿ ವಾಪಸ್ ಬರುವಷ್ಟರಲ್ಲಿ ಮನೆಯಲ್ಲಿ ಕಳ್ಳತನವಾಗಿದ್ದು, ಈ ಸಂಬಂಧ ಚಂದ್ರಾ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಸದ್ಯ ಪ್ರಕರಣದಲ್ಲಿ ಶೇಖ್ ಬಾಬ, ನಯಾಜ್, ಸಲೀಂ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳು ಮನೆಯೊಳಗೆ ಇದ್ದ ಚಿನ್ನ, ಬೆಳ್ಳಿ, ಎರಡು ವಾಚ್ಗಳನ್ನು ಕಳ್ಳತನ ಮಾಡಿದ್ದಾರೆ. ಇನ್ನು ಆರೋಪಿಗಳಿಂದ 1,50,000 ರೂ. ಬೆಲೆ ಬಾಳುವ 50 ಗ್ರಾಂ ಚಿನ್ನದ ಆಭರಣ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.