ಬೆಂಗಳೂರು: ನಗರದಲ್ಲಿ ಸಾರ್ವಜನಿಕರಿಗೆ ಗಾಂಜಾ ಮತ್ತು ಮಾದಕ ವಸ್ತುಗಳನ್ನು ಮಾರುತ್ತಿದ್ದ ದಂಧೆಕೋರರನ್ನು ಪೊಲೀಸರು ರೆಡ್ ಹ್ಯಾಂಡ್ ಆಗಿ ಬಲೆಗೆ ಕೆಡವಿದ್ದಾರೆ.
ಮೈಸೂರು ರಸ್ತೆಯ ಬಾಪೂಜಿನಗರ ಅಂಡರ್ ಪಾಸ್ನಲ್ಲಿ ಮಾದಕ ವಸ್ತುಗಳನ್ನು ಮಾರುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬ್ಯಾಟರಾಯನಪುರ ಪೊಲೀಸರು ಆರೋಪಿಗಳನ್ನು ಸ್ಥಳದಲ್ಲಿಯೇ ವಶಕ್ಕೆ ಪಡೆದಿದ್ದಾರೆ.
ರಹ್ಮತುಲ್ಲಾ, ಆಸಿಫ್ ಪಾಷಾ ಬಂಧಿತ ಆರೋಪಿಗಳಾಗಿದ್ದು, ಸುಮಾರು 1 ಲಕ್ಷ ರೂ ಬೆಲೆಬಾಳುವ 3.4 ಕೆಜಿ ತೂಕದ ಗಾಂಜಾ ಮತ್ತು ಇತರೆ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ನಗರದ ಇತರ ಭಾಗಗಲ್ಲಿ ಡ್ರಗ್ಸ್ ದಂಧೆ ನಡೆಸುತ್ತಿರುವ ಮಾಹಿತಿ ಲಭ್ಯವಾಗಿದ್ದು, ಹೆಚ್ಚಿನ ತನಿಖೆಯನ್ನು ಕೈಗೊಂಡಿದ್ದಾರೆ.
ಓದಿ:ಸಾವಿರಾರು ನಾಣ್ಯಗಳ 'ಸಂಗ್ರಹಕ' ಈ ವಿಶೇಷ ಚೇತನ