ಬೆಂಗಳೂರು: ಕುಡಿದ ನಶೆಯಲ್ಲಿ ಏರಿಯಾದಲ್ಲಿ ಗಲಾಟೆ ಮಾಡಿ ಹಾವಳಿ ಇಡುತ್ತಿದ್ದ ವ್ಯಕ್ತಿಯನ್ನು ಕೊಲೆ ಮಾಡಿದ್ದ ಆರು ಮಂದಿಯನ್ನು ಪುಲಕೇಶಿ ನಗರ ಪೊಲೀಸರು ಬಂಧಿಸಿದ್ದಾರೆ.
ಪುಲಕೇಶಿ ನಗರದ ಐಟಿಸಿ ಕಾಲೋನಿಯಲ್ಲಿ ವಾಸವಾಗಿದ್ದ ಥಾಮಸ್ ಕೊಲೆಯಾದವನು. ಸುಹೈಲ್, ರಂಜಿತ್, ದಿನೇಶ್ ಸೇರಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ. ಜೀವನಹಳ್ಳಿಯಲ್ಲಿ ವಾಸವಾಗಿದ್ದ ಥಾಮಸ್ ಕಲ್ಲಪಲ್ಲಿಯ ಸ್ಮಶಾನದಲ್ಲಿ ಕೆಲಸ ಮಾಡುತ್ತಿದ್ದ. ಕುಡಿತದ ಚಟ ಅಂಟಿಸಿಕೊಂಡಿದ್ದ. ಏರಿಯಾದಲ್ಲಿ ತನ್ನದೇ ಹವಾ ಇಡಲು ಸ್ಥಳೀಯ ಹುಡುಗರೊಂದಿಗೆ ಗಲಾಟೆ ಮಾಡುತ್ತಿದ್ದ. ಹುಡುಗಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ.