ಬೆಂಗಳೂರು: ಹಗಲಲ್ಲಿ ಹಣ್ಣಿನ ವ್ಯಾಪಾರ ಮಾಡಿ ರಾತ್ರಿಯಾಗುತ್ತಿದ್ದಂತೆ ಮನೆಗಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಖದೀಮರ ಗ್ಯಾಂಗ್ ಸಂಜಯನಗರ ಪೊಲೀಸರು ಬಂಧಿಸಿದ್ದಾರೆ.
ಹಣ್ಣಿನ ವ್ಯಾಪಾರಿಗಳ ಸೋಗಿನಲ್ಲಿ ಮನೆಗಳ್ಳತನ: ಬೆಂಗಳೂರಿನಲ್ಲಿ ಗ್ಯಾಂಗ್ ಅಂದರ್
ಹಣ್ಣಿನ ವ್ಯಾಪಾರಿಗಳ ಸೋಗಿನಲ್ಲಿ ಮನೆಗಳ್ಳತನ ಮಾಡುತ್ತಿದ್ದ ಗ್ಯಾಂಗ್ ಬೆಂಗಳೂರಿನ ಸಂಜಯನಗರ ಪೊಲೀಸರ ಖೆಡ್ಡಾಗೆ ಬಿದ್ದಿದೆ.
ತಮಿಳುನಾಡು ಮೂಲದ ಮಣಿ ಅಲಿಯಾಸ್ ನಾಗಮಣಿ, ಆರುಮುಗಂ ಹಾಗೂ ಪಾಂಡಿಯನ್ ಬಂಧಿತ ಆರೋಪಿಗಳು. ಬಂಧಿತರಿಂದ 16 ಲಕ್ಷ ಮೌಲ್ಯದ 316 ಗ್ರಾಂ ಚಿನ್ನಾಭರಣ ಮತ್ತು 200 ಗ್ರಾಂ ಬೆಳ್ಳಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಜೀವನಕ್ಕಾಗಿ ಮಣಿ ಹಾಗೂ ಗ್ಯಾಂಗ್ ಬೀದಿ ಬದಿ ತೆರಳಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದರು. ಹಗಲಲ್ಲಿ ಹಣ್ಣಿನ ವ್ಯಾಪಾರ ಮಾಡ್ತ ಬೀದಿ ಬೀದಿಯಲ್ಲಿ ಅಲೆಯುತ್ತಿದ್ದರು. ಆ ಟೈಮ್ನಲ್ಲೇ ಯಾವ ಮನೆಗಳಿಗೆ ಎರಡ್ಮೂರು ದಿನದಿಂದ ಯಾವ ಮನೆ ಬೀಗ ಹಾಕಿರಬಹುದು ಎಂದು ಗುರುತು ಮಾಡಿಕೊಳ್ಳುತ್ತಿದ್ದರು.
ಮನೆಗೆ ಬಾಗಿಲನ್ನು ಕಬ್ಬಿಣದ ಸಲಾಕೆಯಿಂದ ಮೀಟಿ ಮನೆಯ ಬಾಗಿಲು ತೆರೆದು ಕಳ್ಳತನ ಮಾಡುತ್ತಿದ್ದರು. ಫಿಂಗರ್ ಪ್ರಿಂಟ್ ಸಿಗಬಾರದೆಂದು ಕೈಗೆ ಗ್ಲೌಸ್ ಹಾಕಿಕೊಂಡು ಕಳ್ಳತನ ಮಾಡುತ್ತಿದ್ದರು. ಇವರು ತಮಿಳುನಾಡು ಜೈಲಿನಿಂದ ಜಾಮೀನಿನ ಮೇಲೆ ಹೊರಬಂದಿದ್ದರು ಎಂದು ನಗರ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ.