ಬೆಂಗಳೂರು:ಹಿಂದುಳಿದ ವರ್ಗ ವಿದ್ಯಾರ್ಥಿಗಳ ಹಾಸ್ಟೆಲ್ಗಳಲ್ಲಿ ಮೂಲಭೂತ ಸವಲತ್ತು ಸುಧಾರಣೆಗಾಗಿ 250 ಕೋಟಿ ರೂಪಾಯಿ ಮಂಜೂರಾತಿ ಮಾಡಲಾಗುವುದು. ಹಿಂದುಳಿದ ವರ್ಗಗಳ ನಿಗಮಗಳಿಗೆ ಈಗಾಗಲೇ ಹೆಚ್ಚುವರಿ ಸುಮಾರು 800 ಕೋಟಿ ರೂ. ಅನುದಾನ ನೀಡಿದ್ದೇನೆ. ಅರಸು ಕನಸು ನನಸು ಮಾಡುವುದೇ ನಮ್ಮ ಉದ್ದೇಶ, ಅವರ ವಿಚಾರಗಳನ್ನು ಜಾರಿ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ವಿಧಾನಸೌಧದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆದ ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಡಿ.ದೇವರಾಜ ಅರಸುರವರ 107ನೇ ಜನ್ಮ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡಿದರು. ಹಿಂದುಳಿದ ವರ್ಗಗಳ ಹಾಸ್ಟೆಲ್ ಸುಧಾರಣೆಗೆ 150 ಕೋಟಿ ರೂ., ಬೇರೆ ಸೌಲಭ್ಯಕ್ಕಾಗಿ 100 ಕೋಟಿ ರೂ. ಸೇರಿ 250 ಕೋಟಿ ರೂಪಾಯಿ ಬಿಡುಗಡೆಗೆ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದರು. ಶೀಘ್ರದಲೇ 250 ಕೋಟಿ ರೂ. ಹೆಚ್ಚುವರಿ ಅನುದಾನಕ್ಕೆ ಮಂಜೂರಾತಿ ನೀಡಲಾಗುವುದು ಎಂದರು.