ಕರ್ನಾಟಕ

karnataka

ETV Bharat / state

ಮೈಸೂರಿನಲ್ಲಿ ಜೆಡಿಎಸ್ ಮುಖಂಡರ ಸಭೆ ನಡೆಸಿದ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರು.. - ಮೈಸೂರಿನ ಜೆಡಿಎಸ್ ಮುಖಂಡರ ಸಭೆ ನಡೆಸಿದ ದೇವೇಗೌಡರು

ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿರುವ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಇಂದು ಚಾಮರಾಜನಗರ ಮತ್ತು ಮೈಸೂರಿನ ಜಿಲ್ಲಾವಾರು ಮುಖಂಡರ ಸಭೆ ನಡೆಸಿದರು.

ಜೆಡಿಎಸ್ ವರಿಷ್ಠ ದೇವೇಗೌಡರು

By

Published : Aug 21, 2019, 9:23 PM IST

ಬೆಂಗಳೂರು :ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಿರುವ ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಇಂದು ಚಾಮರಾಜನಗರ ಮತ್ತು ಮೈಸೂರಿನ ಜಿಲ್ಲಾವಾರು ಮುಖಂಡರ ಸಭೆ ನಡೆಸಿದರು.

ಮೈಸೂರಿನ ಜೆಡಿಎಸ್ ಮುಖಂಡರ ಸಭೆ ನಡೆಸಿದ ಹೆಚ್ ಡಿ ದೇವೇಗೌಡರು..

ಮೊದಲು ಚಾಮರಾಜನಗರ ಜಿಲ್ಲೆಯ ಜೆಡಿಎಸ್ ಮುಖಂಡರ ಸಭೆ ನಡೆಸಿದ ಗೌಡರಿಗೆ, ಸ್ಥಳೀಯ ಮಟ್ಟದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಿ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಬೇಕೆಂದು ಮುಖಂಡರಿಗೆ ಸಲಹೆ ನೀಡಿದ್ದಾರೆ. ಮಧ್ಯಾಹ್ನದ ನಂತರ ಮೈಸೂರು ಜಿಲ್ಲೆಯ ಮುಖಂಡರ ಸಭೆ ನಡೆಸಿದ್ದು, ಮೈಸೂರು ಭಾಗದ ಬಹುತೇಕ ನಾಯಕರು ಗೈರಾಗಿದ್ದರು.

ಸಭೆಗೆ ಪಕ್ಷದ ಜಿಲ್ಲಾಧ್ಯಕ್ಷರು, ಕಾರ್ಯಾಧ್ಯಕ್ಷರು, ಮಹಾ ಪ್ರಧಾನಕಾರ್ಯದರ್ಶಿ, ಮಾಜಿ ಸಚಿವರು, ಮಾಜಿ ಹಾಗೂ ಹಾಲಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಪದಾಧಿಕಾರಿಗಳು ತಪ್ಪದೇ ಹಾಜರಾಗಬೇಕೆಂದು ಗೌಡರು ಈಗಾಗಲೇ ಸೂಚನೆ ನೀಡಿದ್ದಾರೆ. ಆದರೆ, ಇಂದಿನ ಸಭೆಗೆ ಪ್ರಮುಖವಾಗಿ ಮಾಜಿ ಸಚಿವರಾದ ಜಿ ಟಿ ದೇವೇಗೌಡ, ಸಾ ರಾ ಮಹೇಶ್ ಹಾಜರಾಗಲಿಲ್ಲ.

ABOUT THE AUTHOR

...view details