ಬೆಂಗಳೂರು: ಖ್ಯಾತ ಗಾಯಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ನಿಧನದಿಂದ ನನಗೆ ತೀವ್ರ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ.
ಎಸ್ಪಿಬಿ ನಿಧನ ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ : ದೇವೇಗೌಡರು - ಎಸ್. ಪಿ. ಬಾಲಸುಬ್ರಹ್ಮಣ್ಯಂ ನಿಧನಕ್ಕೆ ದೇವೇಗೌಡರ ಸಂತಾಪ
ಎಸ್ ಪಿಬಿ ನಿಧನದಿಂದ ನಮ್ಮ ರಾಷ್ಟ್ರಕ್ಕೆ, ವಿಶೇಷವಾಗಿ ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ ಎಂದು ದೇವೇಗೌಡರು ಹೇಳಿದ್ದಾರೆ.
ಎಸ್.ಪಿ.ಬಿ ನಿಧನ ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ : ದೇವೇಗೌಡರು
ಈ ಕುರಿತು ಟ್ವೀಟ್ ಮಾಡಿರುವ ಅವರು, ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸಾವಿರಾರೂ ಹಾಡುಗಳನ್ನು ಹಾಡಿ ಬಹು ದೊಡ್ಡ ಸಾಧನೆ ಮಾಡಿದ್ದಾರೆ.
ಸಂಗೀತ ಕ್ಷೇತ್ರದಲ್ಲಿ ದೊಡ್ಡ ಸಾಧನೆಯಾಗಿದೆ ಎಂದು ಬಣ್ಣಿಸಿದ್ದಾರೆ. ಎಸ್ ಪಿಬಿ ನಿಧನದಿಂದ ನಮ್ಮ ರಾಷ್ಟ್ರಕ್ಕೆ, ವಿಶೇಷವಾಗಿ ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ ಎಂದು ಹೇಳಿದ್ದಾರೆ.