ಕರ್ನಾಟಕ

karnataka

ETV Bharat / state

ನೆರೆ ಪೀಡಿತ ಅಸ್ಸೋಂ ರಾಜ್ಯಕ್ಕೆ ಗರಿಷ್ಠ ನೆರವು ನೀಡಲು ಕೇಂದ್ರಕ್ಕೆ ದೇವೇಗೌಡರ ಆಗ್ರಹ

ಕೋವಿಡ್-19 ಸಾಂಕ್ರಾಮಿಕ ರೋಗವು ದೇಶಾದ್ಯಂತ ಉಲ್ಬಣಗೊಳ್ಳುತ್ತಿರುವಾಗ ಅಸ್ಸೋಂನ ಜನ ಪ್ರವಾಹ ಮತ್ತು ಅದರಿಂದ ಉಂಟಾದ ಸಾವು-ನೋವುಗಳ ಜೊತೆ ಹೋರಾಡುತ್ತಿದ್ದಾರೆ. ಈ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶದಿಂದ ಸ್ಥಳಾಂತರಗಳ್ಳಲು ಹೋರಾಡುತ್ತಿರುವುದು ನೋಡಿದ್ರೆ ಮನಸ್ಸಿಗೆ ಬಹಳ ನೋವುಂಟಾಗುತ್ತದೆ..

Devegowda
Devegowda

By

Published : Jul 17, 2020, 2:18 PM IST

ಬೆಂಗಳೂರು :ಅಸ್ಸೋಂನಲ್ಲಿನ ಪ್ರವಾಹದ ವರದಿಗಳಿಂದ ನಾನು ತೀವ್ರ ನೊಂದಿದ್ದೇನೆ. ಪ್ರವಾಹ ಪೀಡಿತ ರಾಜ್ಯಕ್ಕೆ ಗರಿಷ್ಠ ನೆರವು ನೀಡುವಂತೆ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್ ಡಿ ದೇವೇಗೌಡರು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಕಳೆದ ಕೆಲವು ದಿನಗಳಿಂದ ಅಲ್ಲಿನ ಪರಿಸ್ಥಿತಿ ಸ್ಥಿರವಾಗಿ ಹದಗೆಡುತ್ತಿದೆ ಎಂದು ನನ್ನ ಗಮನಕ್ಕೆ ಬಂದಿದೆ. ಇತ್ತೀಚಿನ ವರದಿಗಳಲ್ಲಿ 60ಕ್ಕೂ ಹೆಚ್ಚು ಜನ ಸಾವನ್ನಪ್ಪಿರುವುದು ನೋವಿನ ಸಂಗತಿ. ಈ ಪ್ರವಾಹದಿಂದ ಸುಮಾರು 40 ಲಕ್ಷಕ್ಕೂ ಹೆಚ್ಚು ಜನ ಬಾಧಿತರಾಗಿದ್ದಾರೆ. ಸುಮಾರು 480 ಪರಿಹಾರ ಶಿಬಿರಗಳನ್ನು ಈಗಾಗಲೇ ಅಲ್ಲಿನ ರಾಜ್ಯ ಸರ್ಕಾರ ಸ್ಥಾಪಿಸಿದ್ರೂ ಕೂಡ ಸಾರ್ವಜನಿಕರ ಮೂಲ ಸೌಕರ್ಯಗಳಿಗೆ ದೊಡ್ಡ ಪ್ರಮಾಣದ ಪೆಟ್ಟುಬಿದ್ದಿದೆ.

ಜೊತೆಗೆ ಸುಮಾರು 60ಕ್ಕೂ ಹೆಚ್ಚು ಪ್ರಾಣಿಗಳು ಕಾಜಿರಂಗಾ ರಾಷ್ಟ್ರೀಯ ಉದ್ಯಾನವನದಲ್ಲಿ ಸಾವನ್ನಪ್ಪಿರುವುದು ಕೂಡ ಬಹಳ ದುಃಖಕರ ಎಂದು ಹೇಳಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗವು ದೇಶಾದ್ಯಂತ ಉಲ್ಬಣಗೊಳ್ಳುತ್ತಿರುವಾಗ ಅಸ್ಸೋಂನ ಜನ ಪ್ರವಾಹ ಮತ್ತು ಅದರಿಂದ ಉಂಟಾದ ಸಾವು-ನೋವುಗಳ ಜೊತೆ ಹೋರಾಡುತ್ತಿದ್ದಾರೆ. ಈ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶದಿಂದ ಸ್ಥಳಾಂತರಗಳ್ಳಲು ಹೋರಾಡುತ್ತಿರುವುದು ನೋಡಿದ್ರೆ ಮನಸ್ಸಿಗೆ ಬಹಳ ನೋವುಂಟಾಗುತ್ತದೆ. ಅಸ್ಸೋಂನ ಪ್ರವಾಹ ಪರಿಸ್ಥಿತಿಯ ಕುರಿತು ತಕ್ಷಣ ಗಮನ ಹರಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡಿದ್ದಾರೆ.

ನಾನು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಮತ್ತು ಅದಾದ ನಂತರವೂ ಕೂಡ ಅಸ್ಸೋಂ ಜನತೆ ಮತ್ತು ಈಶಾನ್ಯಾ ರಾಜ್ಯಗಳ ಜನರು ನನ್ನ ಬಗ್ಗೆ ಅತೀವ ಪ್ರೀತಿ ಮತ್ತು ವಿಶ್ವಾಸ ತೋರಿಸಿದ್ದಾರೆ. ಅಲ್ಲಿನ ಜನರು ಆದಷ್ಟು ಬೇಗ ಈ ಸಂಕಷ್ಟದಿಂದ ಹೊರ ಬರಲಿ ಎಂದು ನಾನು ದೇವರಲ್ಲಿ ಪ್ರಾರ್ಥಿಸುತ್ತೇನೆ. ಈಗ ದೇಶಕ್ಕೆ ಆವರಿಸಿರುವ ಸಾಂಕ್ರಾಮಿಕ ರೋಗ ಕಡಿಮೆ ಆದ ತಕ್ಷಣ ನಾನು ಅಸ್ಸೋಂ ಹಾಗೂ ಈಶಾನ್ಯ ರಾಜ್ಯಗಳಿಗೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ.

ABOUT THE AUTHOR

...view details