ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನಿರಾಕರಿಸಿದ್ದಾರೆ.
ಚಲುವರಾಯಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ದೊಡ್ಡಗೌಡರು - . ಕುಮಾರಸ್ವಾಮಿ ವಿರುದ್ದ ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಹೇಳಿಕೆ
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮುಖಂಡ ಚಲುವರಾಯಸ್ವಾಮಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಲು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ನಿರಾಕರಿಸಿದ್ದಾರೆ. "ಅವರ ಮಾತಿಗೆಲ್ಲ ಪ್ರತಿಕ್ರಿಯೆ ಕೊಡುತ್ತಾ ಕೂರಲೇ" ಎಂದು ಮುಂದೆ ಸಾಗಿದ್ರು.
ಈ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ, "ಅವರ ಮಾತಿಗೆಲ್ಲ ಪ್ರತಿಕ್ರಿಯೆ ಕೊಡುತ್ತಾ ಕೂರಲೇ" ಎಂದು ಮುಂದೆ ಸಾಗಿದ್ರು. ಜೆಡಿಎಸ್ ಪಕ್ಷದ ಕಚೇರಿ ಜೆ.ಪಿ ಭವನದಲ್ಲಿ ಇಂದು ನಡೆಯುತ್ತಿರುವ ಜಿಲ್ಲಾವಾರು ಮುಖಂಡರ ಸಭೆಗೂ ಮುನ್ನ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದರು.
ಇನ್ನುಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗಿನ ಜಿಲ್ಲಾ ಜೆಡಿಎಸ್ ಮುಖಂಡರ ಸಭೆ ನಡೆಯುತ್ತಿದ್ದು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಕಾರ್ಯಾಧ್ಯಕ್ಷ ಮಧು ಬಂಗಾರಪ್ಪ, ಭದ್ರಾವತಿ ತಾಲೂಕಿನ ಮಾಜಿ ಶಾಸಕ ಅಪ್ಪಾಜಿಗೌಡ ಮತ್ತಿತರ ಮುಖಂಡರು ಗೈರಾಗಿದ್ದರು.