ಬೆಂಗಳೂರು:ಸ್ಮಾರ್ಟ್ ಸಿಟಿ ಯೋಜನೆಯಡಿ ಅವೆನ್ಯೂ ರಸ್ತೆಯ ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಬೇಕಿದ್ದು, ಈ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಿರುವುದರಿಂದ ನಿಗದಿತ ಅವಧಿಯಲ್ಲಿ ಕಾಮಗಾರಿ ಮುಕ್ತಾಯಗೊಳಿಸಬೇಕು. ಇನ್ನುಳಿದಂತೆ 4 ರಸ್ತೆಗಳಲ್ಲಿ ವಿನ್ಯಾಸ ಬದಲಾವಣೆ ಇದ್ದಲ್ಲಿ ಕೂಡಲೇ ಇದರ ಬಗ್ಗೆ ಗಮನಹರಿಸಿ ಯೋಜನೆ ಪೂರ್ಣಗೊಳಿಸಬೇಕು ಎಂದು ಮುಖ್ಯ ಅಭಿಯಂತರರು ಸ್ಮಾರ್ಟ್ ಸಿಟಿ ಯೋಜನೆ ಅಧಿಕಾರಿಗಳಿಗೆ ಇಂದು ನಡೆದ ಪಾಲಿಕೆ ಸಭೆಯಲ್ಲಿ ಸೂಚಿಸಿದರು.
ಇನ್ನೂ ಆಯುಕ್ತರು ಕೂಡ ಸಭೆಯಲ್ಲಿ ಮಾತನ್ನಾಡುತ್ತ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವೆನ್ಯೂ ರಸ್ತೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದ್ದು, ಬದಲಿ ವಾಹನ ಸಂಚಾರಕ್ಕೆ ಪ್ರಸ್ತಾವನೆಯನ್ನು ಸಂಚಾರ ಇಲಾಖೆಗೆ ಸಲ್ಲಿಸಿ ಮಾಹಿತಿ ನೀಡಿದಲ್ಲಿ ಕೂಡಲೆ ಇಲಾಖೆಯಿಂದ ಅನುಮತಿ ಕೊಡಿಸಲಾಗುವುದು ಎಂದು ತಿಳಿಸಿದರು.