ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ಹಿನ್ನೆಲೆಯಲ್ಲಿ ಶ್ರೀಗಳು ಶೀಘ್ರ ಗುಣಮುಖರಾಗಲೆಂದು ಬೆಂಗಳೂರಿನಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಪೇಜಾವರ ಶ್ರೀಗಳ ಆರೋಗ್ಯ ಸುಧಾರಣೆಗೆ 101 ತೆಂಗಿನಕಾಯಿ ಒಡೆದ ಭಕ್ತರು - ಆನಂದರಾವ್ ಸರ್ಕಲ್ನಲ್ಲಿರುವ ಗಣಪತಿ ದೇವಸ್ಥಾನ
ಪೇಜಾವರ ಶ್ರೀಗಳ ಆರೋಗ್ಯ ಸುಧಾರಿಸಲಿ ಎಂದು ಬೆಂಗಳೂರಿನ ಆನಂದ್ರಾವ್ ಸರ್ಕಲ್ನಲ್ಲಿ ಕರ್ನಾಟಕ ಸಂಘಟನೆಗಳ ಒಕ್ಕೂಟದ ವತಿಯಿಂದ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, 101 ತೆಂಗಿನಕಾಯಿಗಳನ್ನು ಒಡೆಯಲಾಯಿತು.
ಪೇಜಾವರ ಶ್ರೀಗಳ ಆರೋಗ್ಯ ಸುಧಾರಣೆಗೆ 101 ಕಾಯಿ ಒಡೆದು ಭಕ್ತರು ಪೂಜೆ ಸಲ್ಲಿಸಿದರು.
ಕರ್ನಾಟಕ ಸಂಘಟನೆಗಳ ಒಕ್ಕೂಟದಿಂದ ಆನಂದರಾವ್ ಸರ್ಕಲ್ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, 101 ತೆಂಗಿನಕಾಯಿ ಒಡೆದು ಪ್ರಾರ್ಥನೆ ಸಲ್ಲಿಸಲಾಯಿತು.
ಇದೇ ವೇಳೆ ಮಾತಾನಾಡಿದ ಸಂಘದ ಅಧ್ಯಕ್ಷ ನಾಗೇಶ್, ಪೇಜಾವರ ಶ್ರೀಗಳು ಬೇಗ ಗುಣಮುಖರಾಗಬೇಕು. ಸರೋಜಿನಿ ಮಹಿಷಿ ವರದಿ ಸಂಬಂಧದ ಹೋರಾಟದಲ್ಲೂ ಶ್ರೀಗಳು ನಮ್ಮೊಟ್ಟಿಗೆ ಕೈ ಜೋಡಿಸಿದ್ದರು. ಶ್ರೀಗಳ ಆರೋಗ್ಯ ವಿಚಾರಿಸಲು ಬೆಂಗಳೂರಿನಿಂದ ನಮ್ಮ ತಂಡವೂ ಮಂಗಳೂರಿಗೆ ತೆರಳಲಿದೆ ಎಂದು ಅವರು ತಿಳಿಸಿದರು.