ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಹಾಗೂ ಜಾಲಿ ರೈಡ್ಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಬೈಕ್ ಕಳ್ಳರನ್ನು ಡಿ.ಜೆ ಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಆರ್ಬಾಜ್ ಖಾನ್ ಹಾಗೂ ಮೊಹಮ್ಮದ್ ಸೂಫಿಯಾನ್ ಬಂಧಿತರಾಗಿದ್ದು, ಇಬ್ಬರು ಡಿ.ಜೆ. ಹಳ್ಳಿಯ ನಿವಾಸಿಗಳಾಗಿದ್ದು ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು.
ಜಾಲಿ ರೈಡ್ಗಾಗಿ ಬೈಕ್ ಕಳ್ಳತನ: ಇಬ್ಬರ ಬಂಧನ - ಡಿ.ಜಿ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ
ಐಷಾರಾಮಿ ಜೀವನಕ್ಕಾಗಿ ಹಾಗೂ ಜಾಲಿ ರೈಡ್ಗಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಬೈಕ್ ಕಳ್ಳರನ್ನು ಡಿ.ಜೆ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬೈಕ್ ಚಾಲನೆ ವ್ಯಾಮೋಹ ಬೆಳೆಸಿಕೊಂಡಿದ್ದ ಆರೋಪಿಗಳು ಸಾರ್ವಜನಿಕ ಸ್ಥಳಗಳಲ್ಲಿ ನಿಲ್ಲಿಸಿದ್ದ ಬೈಕ್ಗಳನ್ನೇ ಟಾರ್ಗೆಟ್ ಮಾಡಿಕೊಂಡು, ಕಳ್ಳತನ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದರು. ಹೀಗಾಗಿ ರಾತ್ರಿ ವೇಳೆ ನಿಲ್ಲಿಸಿದ್ದ ಬೈಕ್ಗಳ ಹ್ಯಾಂಡಲ್ ಮುರಿದು ಕಳ್ಳತನ ಮಾಡಿ ಜಾಲಿ ರೈಡ್ ಮಾಡಿ ಎಲ್ಲೆಂದರಲ್ಲಿ ಬೈಕ್ಗಳನ್ನು ಬಿಟ್ಟು ಹೋಗುತ್ತಿದ್ದರು.
ಡಿ.ಜೆ. ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವಿಶೇಷ ತಂಡ ರಚಿಸಿ ತನಿಖೆ ನಡೆಸಿದಾಗ ಕಳ್ಳರು ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ 19 ಬೈಕ್ಗಳನ್ನು ಜಪ್ತಿ ಮಾಡಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.