ಬೆಂಗಳೂರು:ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದು ಶಾಂತಿ ಸುವ್ಯವಸ್ಥೆಗೆ ಭಂಗ ತರುವಂತಹವರ ವಿರುದ್ಧ ಹಿಂದೆಯೂ ಕ್ರಮ ಕೈಗೊಂಡಿದ್ದೇವೆ, ಮುಂದೆಯೂ ಕೈಗೊಳ್ಳುತ್ತೇವೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದ್ದಾರೆ. ನಗರ ಪೊಲೀಸ್ ಕಮೀಷನರ್ ಕಚೇರಿಯಲ್ಲಿ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸೂದ್, ಪ್ರತಿ ಜಿಲ್ಲೆಗೆ ಭೇಟಿ ನೀಡಿ ಪೊಲೀಸರ ಅಹವಾಲು ಕೇಳುತ್ತೇನೆ. ಅದೇ ರೀತಿ ಬೆಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಿ ಚರ್ಚಿಸಿದ್ದೇವೆ. ಪೊಲೀಸರ ಅಹವಾಲುಗಳು, ಕುಂದು ಕೊರತೆಗಳು, ಅಗತ್ಯತೆಗಳ ಬಗ್ಗೆ ಚರ್ಚಿಸಲಾಗಿದೆ ಎಂದರು.