ಬೆಂಗಳೂರು: ರಾಜ್ಯದಲ್ಲಿ ಕೋವಿಡ್- 19 ಆತಂಕ ಹೆಚ್ಚಾದ ಹಿನ್ನೆಲೆ ಬಹುತೇಕ ಕಡೆ ಜನರಿಗೆ ಪೊಲೀಸರು ಲಾಠಿ ರುಚಿ ತೋರಿಸಿ, ಅವರನ್ನ ಚದುರಿಸಿದ್ದಾರೆ. ಸದ್ಯ ಬೆಂಗಳೂರಿನಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಸಿಎಂ ಆದೇಶ ಬೆನ್ನಲ್ಲೇ ಹಿರಿಯ ಅಧಿಕಾರಿಗಳ ಜತೆ ಡಿಜಿ ಸಭೆ... ಲಾಕ್ಡೌನ್ ಬಗ್ಗೆ ಮಹತ್ವದ ನಿರ್ಧಾರ
ಬೆಂಗಳೂರಿನಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ನಿನ್ನೆಯಷ್ಟೇ ಸಿಎಂ ರಾಜ್ಯದಲ್ಲಿ ಲಾಕ್ಡೌನ್ ಆದೇಶ ಹೊರಡಿಸಿದ್ದರಿಂದ, ಸಭೆಯಲ್ಲಿ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲಾಗುತ್ತಿದೆ.
ಈ ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸೇರಿದಂತೆ ಎಲ್ಲ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ.
ನಿನ್ನೆಯಷ್ಟೇ ಸಿಎಂ ರಾಜ್ಯದಲ್ಲಿ ಲಾಕ್ಡೌನ್ ಆದೇಶ ಹೊರಡಿಸಿದ್ದರಿಂದ, ಸಭೆಯಲ್ಲಿ ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಕುರಿತು ಚರ್ಚಿಸಲಾಗುತ್ತಿದೆ. ಇಂದು ರಾತ್ರಿ 12 ಗಂಟೆಯವರೆಗೆ ಬೆಂಗಳೂರಿನಿಂದ ಹೊರ ಹೋಗುವವರು, ಬೆಂಗಳೂರಿಗೆ ಬರುವವರಿಗೆ ಮಾತ್ರ ಅವಕಾಶ ನೀಡುವ ಬಗ್ಗೆ ಚರ್ಚಿಸಲಾಗುತ್ತಿದೆ. ರಾತ್ರಿ 12 ಗಂಟೆ ಬಳಿಕ ವಾಹನಗಳ ಸಂಚಾರ ಸ್ಥಗಿತಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗ್ತಿದೆ ಎಂದು ಹೇಳಲಾಗ್ತಿದೆ.
TAGGED:
ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ