ಚಿಕ್ಕಬಳ್ಳಾಪುರ: ಜಿಲ್ಲಾ ಪೊಲೀಸ್ ಕಚೇರಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಭೇಟಿ ನೀಡಿ ಜಿಲ್ಲೆಯ ಶಾಂತಿ ಸುವ್ಯವಸ್ಥೆಯ ಬಗ್ಗೆ ಮಾಹಿತಿ ಪಡೆದರು.
ಸಿಲಿಕಾನ್ ಸಿಟಿ ಸೇರಿದಂತೆ ರಾಜ್ಯದ ಹಲವೆಡೆ ನಡೆಯುತ್ತಿರುವ ಡ್ರಗ್ ಮಾಫಿಯಾಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಎಲ್ಲಾ ಕಡೆ ಹದ್ದಿನ ಕಣ್ಣು ಇಡಲಾಗಿದೆ. ಈಗಾಗಲೇ ಹಲವೆಡೆ ಗಾಂಜಾ ಸೇರಿದಂತೆ ಹಲವು ಮತ್ತು ಮಾದಕ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಶಾಂತಿಯುತವಾಗಿದೆ. ಕೇಂದ್ರದ ಸರ್ಕಾರದ ಏಜೆನ್ಸಿ ಜೊತೆಗೂಡಿ ಆಂತರಿಕ ಭದ್ರತೆ ನೀಡಲಾಗುವುದು ಎಂದರು. ಕೊರೊನಾ ಸಮಯದಲ್ಲಿ ಪೊಲೀಸ್ ಅಧಿಕಾರಿಗಳು ಹೆಚ್ಚಿನ ಶ್ರಮವಹಿಸಿದ್ದು, ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ರು.