ಬೆಂಗಳೂರು:ನಕಲಿ ಜಾತಿ ಪ್ರಮಾಣಪತ್ರ ನೀಡಿರುವ ಆರೋಪ ಎದುರಿಸುತ್ತಿರುವ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ವಿಚಾರಣೆಗೆ ಹಾಜರಾಗುವಂತೆ ಮನೆಯ ಗೋಡೆಗೆ ನೋಟಿಸ್ ಅಂಟಿಸಲಾಗಿದೆ. ಈ ಬಗ್ಗೆ ರಾಜ್ಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಇಲಾಖೆಯ ಡಿಜಿಪಿ ಡಾ. ರವೀಂದ್ರನಾಥ್ ಮಾಹಿತಿ ನೀಡಿದ್ದಾರೆ. ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿ ಐಪಿಎಸ್ ಅಧಿಕಾರಿ ಹುದ್ದೆಗೆ ಏರಿದ್ದಾರೆ ಎಂದು ದಶಕಗಳ ಹಿಂದೆಯೇ ಆರೋಪ ಕೇಳಿಬಂದಿತ್ತು.
ಈ ಹಿಂದೆಯೇ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯಗೆ ನೋಟಿಸ್ ನೀಡಲಾಗಿತ್ತು. ಆದರೆ ಅವರು ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಅವರ ಮನೆಗೆ ಇಂದು ಇನ್ಸ್ಪೆಕ್ಟರ್ ಕುಮಾರಸ್ವಾಮಿ ನೋಟಿಸ್ ಅಂಟಿಸಿದ್ದಾರೆ. ಕೆಂಪಯ್ಯ ಅವರಿಗೆ ಸಂಬಂಧಿಸಿದ ಕಡತ ಸಹ ನಮ್ಮ ಕಚೇರಿಯಲ್ಲಿ ಇರಲಿಲ್ಲ. ಅದು ಬೇರೆ ಕಡೆ ಇಡಲಾಗಿತ್ತು. ಅದನ್ನು ಈಗ ತನಿಖೆಗೆ ಒಳಪಡಿಸಲಾಗಿದೆ ಎಂದರು.