ಬೆಂಗಳೂರು: ಪ್ರತಿಪಕ್ಷ ನಾಯಕರಿಗೆ ಕೊರೊನಾ ಪಾಸಿಟಿವ್ ಅಂಕಿ ಅಂಶಗಳನ್ನು ನೀಡುವ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಪ್ಪು ಮಾಹಿತಿ ನೀಡಿದ್ದಾರಾ ಎನ್ನುವ ಪ್ರಶ್ನೆ ಉದ್ಭವಿಸಿದೆ.
ಕೊರೊನಾ ಪಾಸಿಟಿವ್ ಅಂಕಿ ಅಂಶಗಳ ಕುರಿತು ಕಾಂಗ್ರೆಸ್ ನಿಯೋಗಕ್ಕೆ ತಪ್ಪು ಮಾಹಿತಿ ನೀಡಿದರಾ ಸಿಎಂ? ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಿಯೋಗದ ಜೊತೆ ಮಾತುಕತೆ ನಡೆಸುವ ವೇಳೆ ರಾಜ್ಯದಲ್ಲಿ 410 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. 14 ರೋಗಿಗಳು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿ ಮುಂಜಾಗ್ರತಾ ಕ್ರಮಗಳ ಕುರಿತು ವಿವರಣೆ ನೀಡಿದ್ರು.
ಆದರೆ ವಾಸ್ತವವಾಗಿ ಮಧ್ಯಾಹ್ನ 12 ಗಂಟೆಗೆ ಬಿಡುಗಡೆಯಾದ ಕೊರೊನಾ ಹೆಲ್ತ್ ಬುಲೆಟಿನ್ನಲ್ಲಿ ಇಂದು ಮಧ್ಯಾಹ್ನದವರೆಗೂ 388 ಕೊರೊನಾ ಪಾಸಿಟಿವ್ ಪ್ರಕರಣಗಳು ಬಂದಿರುವ ಬಗ್ಗೆ ಅಧಿಕೃತ ಮಾಹಿತಿ ಇದೆ. ಇದರಲ್ಲಿ ಇಂದು ಹೊಸದಾಗಿ ಪತ್ತೆಯಾದ ನಾಲ್ಕು ಪ್ರಕರಣಗಳು ಸೇರಿವೆ.
ಆದರೆ ಕೊರೊನಾ ಹೆಲ್ತ್ ಬುಲೆಟಿನ್ನಲ್ಲಿ ಪ್ರಕಟಿಸಿದ ಮಾಹಿತಿ ಹಾಗೂ ಸಿಎಂ ನೀಡಿರುವ ಮಾಹಿತಿಯಲ್ಲಿ ಸಾಕಷ್ಟು ವ್ಯತ್ಯಾಸವಿದ್ದು, ಮುಖ್ಯಮಂತ್ರಿ ಅವರಿಗೆ ಮಾಹಿತಿ ಇಲ್ಲವಾ ಅಥವಾ ತಪ್ಪು ಮಾಹಿತಿಯನ್ನು ಸಿಎಂ ಕೊಟ್ಡಿದ್ದಾರಾ ಎನ್ನುವ ಅನುಮಾನ ಕಾಡುತ್ತಿದೆ.