ಬೆಂಗಳೂರು: ನಗರದ ಕೆ ಆರ್ ಪುರದಲ್ಲಿ ರೈತರು ಗೋಣಿಚೀಲ ಹೊದ್ದುಕೊಂಡು ವಿಭಿನ್ನವಾಗಿ ಪ್ರತಿಭಟನೆ ನಡೆಸಿದರು.
ಅಖಿಲ ಕರ್ನಾಟಕ ರೈತರು ಮತ್ತು ವ್ಯಾಪಾರಿಗಳ ಒಕ್ಕೂಟದ ವತಿಯಿಂದ ಭಾರತ್ ಬಂದ್ಗೆ ಬೆಂಬಲ ವ್ಯಕ್ತಪಡಿಸಿ ಗೋಣಿಚೀಲ ಧರಿಸಿ ವಿನೂತನವಾಗಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ನಂತರ ರೈತರನ್ನು ಪೊಲೀಸರು ತಡೆದು ಬಂಧಿಸಿ ಮಹದೇವಪುರ ಪೊಲೀಸ್ ಠಾಣೆಗೆ ಕಳುಹಿಸಲಾಯಿತು. ಒಕ್ಕೂಟದ ಅಧ್ಯಕ್ಷ ಎಲೆ ಶ್ರೀನಿವಾಸ್ ಮಾತನಾಡಿ, ರೈತರಿಗೆ ಮಾರಕವಾಗಿರುವ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ರೈತರಿಂದ ಗೋಣಿಚೀಲ ಧರಿಸಿ ವಿಭಿನ್ನ ಪ್ರತಿಭಟನೆ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಪೊರೇಟ್ ಕಂಪನಿಗಳ ಪರವಾಗಿ ಕೆಲಸ ಮಾಡುತ್ತಾರೆ. ಕೇಂದ್ರ ಸರ್ಕಾರದ ನೀತಿಗಳಿಂದ ದೇಶದ ರೈತರು ಸೇರಿದಂತೆ ಎಲ್ಲರೂ ಬೀದಿಗೆ ಬಂದಿದ್ದಾರೆ. ಕೃಷಿ ಕಾಯ್ದೆ ಯಾರಿಗೂ ಉಪಯೋಗವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆಮೇಲೆ ಅರೆಬೆತ್ತಲೆಯಾಗಿ ಮಲಗಿ ರೈತರ ಪ್ರತಿಭಟನೆ
ಕೇಂದ್ರ ಸರ್ಕಾರದ ಆಡಳಿತದಿಂದ 30 ವರ್ಷದ ಹಿಂದಿನ ಸ್ಥಿತಿಗೆ ಹೋಗಿದ್ದೇವೆ. ಕ್ರಿಕೆಟಿಗರು, ನಟರಿಗೆ ಸಣ್ಣ ಗಾಯವಾದರೆ ಸಾಕು, ಟ್ವೀಟ್ ಮಾಡಿ ಯೋಗಕ್ಷೇಮ ವಿಚಾರಿಸುವ ಮೋದಿಗೆ ದೇಶದ ಬಡವರ ಮತ್ತು ರೈತರ ಬಗ್ಗೆ ಕಾಳಜಿ ಇಲ್ಲವೆಂದು ಕಿಡಿಕಾರಿದರು.