ಬೆಂಗಳೂರು :ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪ್ರದೇಶ ಕಾಂಗ್ರೆಸ್ನ ನಾನಾ ಘಟಕಗಳ ಮುಖ್ಯಸ್ಥರ ಜತೆ ಸಮಾಲೋಚನೆ ನಡೆಸಿ, ಸಲಹೆ-ಸೂಚನೆಗಳನ್ನು ನೀಡಿದರು.
ಪಕ್ಷ ಸಂಘಟನೆ, ಸರ್ಕಾರದ ವಿರುದ್ಧ ಹೋರಾಟ, ಕೋವಿಡ್ ನಿಯಂತ್ರಣಕ್ಕೆ ಕಾಂಗ್ರೆಸ್ ಆರಂಭಿಸಿರುವ ಆರೋಗ್ಯ ಹಸ್ತ ಕಾರ್ಯಕ್ರಮ ಸೇರಿ ಹಲವು ವಿಚಾರಗಳ ಕುರಿತು ಈ ಸಂದರ್ಭದಲ್ಲಿ ಚರ್ಚೆ ನಡೆದಿದೆ. ಮುಂದಿನ ದಿನಗಳಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ನಡೆಸಬಹುದಾದ ಹೋರಾಟಗಳ ಕುರಿತು ಮುಖಂಡರಿಂದ ಡಿಕೆಶಿ ಮಾಹಿತಿ ಪಡೆದಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ಕೋವಿಡ್ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಕೈಗೊಂಡ ಕ್ರಮಗಳ ಮಾಹಿತಿ ಪಡೆದುಕೊಂಡಿರುವ ಅವರು, ಪಕ್ಷದ ವೇದಿಕೆಯಲ್ಲಿ ಈ ಕುರಿತು ಚರ್ಚಿಸಿ ಹೋರಾಟದ ರೂಪುರೇಷೆ ಹೆಣೆಯುವ ಪ್ರಯತ್ನ ನಡೆಸಿದ್ದಾರೆ.