ಬೆಂಗಳೂರು: ರಾಜ್ಯ ಬಿಜೆಪಿ ಮುಖಂಡರ ವಿರುದ್ಧ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆ ಪ್ರಕರಣ ಹಿನ್ನೆಲೆ ಕಾಂಗ್ರೆಸ್ ಮುಖಂಡರ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ. ಬಿಜೆಪಿಗರು ಕಾಂಗ್ರೆಸ್ ಪಕ್ಷದ ಮೇಲೆ ಇಲ್ಲಸಲ್ಲದ ಆರೋಪ ಮಾಡ್ತಿದ್ದಾರೆ ಎಂದು ಹರಿಹಾಯ್ದರು