ಕರ್ನಾಟಕ

karnataka

ETV Bharat / state

ಪ್ರಿಯಾಂಕ ಬಂಧನ ಖಂಡಿಸಿ, ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ದಿನೇಶ್​ ಗುಂಡೂರಾವ್​

ಕೇಂದ್ರ ಸರ್ಕಾರದ ಕುಮ್ಮಕ್ಕಿನ ಮೇಲೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ, ಪೊಲೀಸರ ಮೂಲಕ ಪ್ರಿಯಾಂಕ ಗಾಂಧಿ ಅವರನ್ನ ಬಂಧಿಸಿದೆ. ಈ ಮೂಲಕ ಅಲ್ಲಿನ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದೆ-ದಿನೇಶ್​ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ.

ಪ್ರಿಯಾಂಕ ಗಾಂಧಿ ಬಂಧನ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಗೆ ಸಿಎಂ ಸೂಚನೆ

By

Published : Jul 19, 2019, 5:35 PM IST

ಬೆಂಗಳೂರು:ಇಂದು ಉತ್ತರಪ್ರದೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರರವರನ್ನು ಉತ್ತರಪ್ರದೇಶ ಪೊಲೀಸರು ಬಂಧಿಸಿರುವುದನ್ನು ಖಂಡಿಸಿ, ರಾಜ್ಯದಾದ್ಯಂತ ಪ್ರತಿಭಟನೆ ಮಾಡಲು ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಕರೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಈ ಕರೆ ಕೊಟ್ಟಿರುವ ದಿನೇಶ್ ಗುಂಡೂರಾವ್​, ಕೂಡಲೇ ಪಕ್ಷದ ಕಾರ್ಯಕರ್ತರು ಜಾಗೃತರಾಗಿ ರಾಜ್ಯದೆಲ್ಲೆಡೆ ಪ್ರತಿಭಟನೆಗೆ ಮುಂದಾಗಬೇಕು. ಕೇಂದ್ರ ಸರ್ಕಾರದ ಕುಮ್ಮಕ್ಕಿನ ಮೇಲೆ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಈ ಕಾರ್ಯವನ್ನು ಪೊಲೀಸರ ಮೂಲಕ ಮಾಡಿಸಿದೆ. ಈ ಮೂಲಕ ಅಲ್ಲಿನ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಪಕ್ಷವನ್ನು ರ್ದುಬಲಗೊಳಿಸಲು ಬಿಜೆಪಿ ಯತ್ನಿಸುತ್ತಿದೆ. ಇದಕ್ಕೆ ಕಾರ್ಯಕರ್ತರು ಅವಕಾಶ ಮಾಡಿಕೊಡಬಾರದು. ಸ್ವಾತಂತ್ರ್ಯ ಪೂರ್ವದಿಂದಲೂ‌ ಅಸ್ಥಿತ್ವದಲ್ಲಿರುವ ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಬಿಜೆಪಿ ಸಂಚು ರೂಪಿಸಿದೆ. ನಾವೆಲ್ಲಾ ಒಂದಾಗಿ ಈ ಪ್ರಯತ್ನ ತಡೆಯಬೇಕಿದೆ ಎಂದಿದ್ದಾರೆ.

ಪ್ರಿಯಂಕಾ ವಾದ್ರಾ ಅವರನ್ನು ಬಂಧಿಸಲಾಗಿದೆ. ರಾಹುಲ್ ಗಾಂಧಿ ಅವರನ್ನು ದುರ್ಬಲರು ಎಂಬಂತೆ ಬಿಂಬಿಸಲಾಗುತ್ತಿದೆ. ಇದನ್ನೆಲ್ಲಾ ನಮ್ಮ ಕಾರ್ಯಕರ್ತರು ತಡೆಯುವ ಕಾರ್ಯ ಮಾಡಬೇಕು. ಇದಕ್ಕಾಗಿ ರಾಜ್ಯಾದ್ಯಂತ ಗಂಭೀರ ಹೋರಾಟಕ್ಕೆ ಮುಂದಾಗಿ ಎಂದು ಕರೆಕೊಟ್ಟಿದ್ದಾರೆ.

For All Latest Updates

ABOUT THE AUTHOR

...view details