ಕರ್ನಾಟಕ

karnataka

ETV Bharat / state

ಪುಂಡು ಪೋಕರಿಯಂತೆ ಮಾತಾಡಿದರೆ ಗೌರವ ಉಳಿಯುವುದಿಲ್ಲ.. ಸಿ ಟಿ ರವಿಗೆ ದಿನೇಶ್ ಗುಂಡೂರಾವ್ ಟಾಂಗ್​ - ದಿನೇಶ್​ ಗುಂಡೂರಾವ್

ಸಿದ್ದರಾಮಯ್ಯರ ವಿರುದ್ಧ ಕೀಳು‌ ಪದಪ್ರಯೋಗ ಮಾಡಿ ರವಿ ತಮ್ಮ ಹೊಲಸು ನಾಲಗೆ ಪ್ರದರ್ಶಿಸಿದ್ದಾರೆ ಎಂದು ದಿನೇಶ್​ ಗುಂಡೂರಾವ್​ ಕಿಡಿಕಾರಿದ್ದಾರೆ.

Dinesh Gundurao and C T Ravi
ದಿನೇಶ್​ ಗುಂಡೂರಾವ್​ ಹಾಗೂ ಸಿಟಿ ರವಿ

By

Published : Sep 13, 2022, 2:29 PM IST

ಬೆಂಗಳೂರು: ಪುಂಡು ಪೋಕರಿಯಂತೆ ಮಾತಾಡಿದರೆ ಗೌರವ ಉಳಿಯುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರಿಗೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಾಕೀತು ಮಾಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಸಿ.ಟಿ ರವಿ ಹೇಳಿಕೆಗೆ ದಿನೇಶ್ ಗುಂಡೂರಾವ್ ಕಿಡಿಕಾರಿದ್ದು, ಟ್ವೀಟ್ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯರ ಬಗ್ಗೆ ಅತ್ಯಂತ ತುಚ್ಛವಾಗಿ ಮಾತಾಡಿರುವ ಸಿ.ಟಿ ರವಿ ತಮ್ಮ ಸಂಸ್ಕಾರವೇನು ಎಂಬುದನ್ನು ತೋರಿಸಿಕೊಂಡಿದ್ದಾರೆ. ಸಾರ್ವಜನಿಕ ಜೀವನದಲ್ಲಿರುವವರು ತಾವು ಬಳಸುವ ಭಾಷೆಯ ಮೇಲೆ ಹಿಡಿತವಿರಬೇಕು. ರವಿ ಸಾರ್ವಜನಿಕ ಜೀವನದಲ್ಲಿರುವವರು, ಜೊತೆಗೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಈ ಸ್ಥಾನದ ಘನತೆಗೆ ತಕ್ಕ ಮಾತಾಡಲಿ ಎಂದು ಸಲಹೆ ನೀಡಿದ್ದಾರೆ.

ಸಿ.ಟಿ ರವಿಯವರಿಗೆ 'ಲೂಟಿ ರವಿ' ಎಂಬ ಅನ್ವರ್ಥನಾಮ ಇಟ್ಟಿದ್ದು ಸಿದ್ದರಾಮಯ್ಯರಲ್ಲ. ಸ್ವತಃ ಅವರ ಕ್ಷೇತ್ರದ ಬಿಜೆಪಿ ಕಾರ್ಯಕರ್ತರೇ ಲೂಟಿ ರವಿ ಎನ್ನುತ್ತಾರೆ. ಇದನ್ನು ಸಿದ್ದರಾಮಯ್ಯ‌ ಹೇಳಿದ್ದೇ ರವಿಯವರಿಗೆ ಚೇಳು ಕಡಿದಂತಾಗಿದೆ. ಹಾಗಾಗಿ ಸಿದ್ದರಾಮಯ್ಯರ ವಿರುದ್ಧ ಕೀಳು‌ ಪದಪ್ರಯೋಗ ಮಾಡಿ ರವಿ ತಮ್ಮ ಹೊಲಸು ನಾಲಗೆ ಪ್ರದರ್ಶಿಸಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿಕೆಯನ್ನು ಸಹ ಸಮರ್ಥಿಸಿಕೊಂಡಿದ್ದಾರೆ.

ಕೆಲವರಿಗೆ ದೊಡ್ಡವರನ್ನು ತೆಗಳಿ ದೊಡ್ಡವರೆನಿಸಿಕೊಳ್ಳುವ ಚಟವಿರುತ್ತದೆ. ಸಿ.ಟಿ ರವಿಗೂ ಈ ಚಟವಿದೆ‌. ಸಿದ್ದರಾಮಯ್ಯರ ರಾಜಕೀಯ ಅನುಭವ, ಹಿರಿತನ ಮತ್ತು ಯೋಗ್ಯತೆ‌ ಈ ನಾಡಿಗೆ ತಿಳಿದಿದೆ. ಅವರ ಬಗ್ಗೆ ಕೀಳಾಗಿ ಮಾತಾಡುವ ರವಿ ತಮ್ಮ ಯೋಗ್ಯತೆಯೇನು ಎಂದು ಆತ್ಮವಿಮರ್ಶೆ ಮಾಡಿಕೊಳ್ಳಲಿ. ಪುಂಡು ಪೋಕರಿಯಂತೆ ಮಾತಾಡಿದರೆ ಗೌರವ ಉಳಿಯುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:'ನನ್ನ ಸಿ.ಟಿ.ರವಿ ಲೂಟಿ ರವಿ ಅಂದರೆ ನಾನು ಸಿದ್ದ ಪೆದ್ದ ಅನ್ನಬಹುದಲ್ವಾ?'

ABOUT THE AUTHOR

...view details