ಬೆಂಗಳೂರು:ರಾಜ್ಯದ 15 ಕ್ಷೇತ್ರಗಳಲ್ಲಿ ಘೋಷಣೆಯಾಗಿರುವ ಉಪ ಚುನಾವಣೆಯ ನೀತಿ ಸಂಹಿತೆ ಜಾರಿಯನ್ನು ಮುಂದೂಡಿರುವ ಕ್ರಮವನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ನೀತಿ ಸಂಹಿತೆ ಜಾರಿ ಮುಂದೂಡಿಕೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ಕೆಪಿಸಿಸಿ ಅಧ್ಯಕ್ಷ - ಇತ್ತೀಚಿನ ಬೆಂಗಳೂರು ಸುದ್ದಿ
ರಾಜ್ಯದ 15 ಕ್ಷೇತ್ರಗಳಲ್ಲಿ ಘೋಷಣೆಯಾಗಿರುವ ಉಪ ಚುನಾವಣೆಯ ನೀತಿ ಸಂಹಿತೆ ಜಾರಿಯನ್ನು ಮುಂದೂಡಿರುವ ಕ್ರಮವನ್ನು ಪ್ರಶ್ನಿಸಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿದೆ. ಆದರೆ, ನೀತಿ ಸಂಹಿತೆಯನ್ನು ನ.11ಕ್ಕೆ ಮುಂದೂಡಲಾಗಿದೆ. ಇದನ್ನು ರದ್ದುಗೊಳಿಸಬೇಕು, ಚುನಾವಣಾ ನೀತಿ ಸಂಹಿತೆಯನ್ನು ದಿನಾಂಕ 17ರಿಂದಲೇ ಅನ್ವಯವಾಗುವಂತೆ ಆದೇಶ ಹೊರಡಿಸಬೇಕೆಂದು ಗುಂಡೂರಾವ್ ಅರ್ಜಿ ಸಲ್ಲಿಸುವ ಮೂಲಕ ಮನವಿ ಮಾಡಿದ್ದಾರೆ.
ಬಿ.ವೀರಪ್ಪ ಅವರಿದ್ದ ಏಕಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಿ, ರಾಜ್ಯದಲ್ಲಿ ಚುನಾವಣಾ ಮುಂದೂಡಿಕೆ ಆಗಿದೆ. ಆದರೆ ಚುನಾವಣೆಯನ್ನು ಹಿಂಪಡೆಯಲಾಗಲ್ಲ. ಹೀಗಿರುವಾಗ ಚುನಾವಣಾ ದಿನಾಂಕ ಘೋಷಣೆಯಾದಾಗಿನಿಂದಲೇ ನೀತಿಸಂಹಿತೆ ಜಾರಿಯಲ್ಲಿರುತ್ತೆ. ಅಲ್ಲದೇ, ನೀತಿಸಂಹಿತೆ ಜಾರಿಯಲ್ಲಿರುವಾಗಲೇ ರಾಜ್ಯ ಸರ್ಕಾರ ನಿಗಮ ಮಂಡಳಿಗಳಿಗೆ, ಕೆಲ ಬೋರ್ಡ್‌ಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿದ್ದು, ಚುನಾವಣಾ ಆಯೋಗ ಯಾಕೆ ಸರ್ಕಾರದ ಮೇಲೆ ಕ್ರಮ ಕೈಗೊಂಡಿಲ್ಲ? ಎಂಬ ಕೆಲ ವಿಚಾರಗಳನ್ನು ಪ್ರಸ್ತಾಪಿಸಲಾಯಿತು. ಆದರೆ ಚುನಾವಣಾ ಆಯೋಗದ ಪರ ವಾದ ಮಾಡಬೇಕಿದ್ದ ವಕೀಲರು ಗೈರಾಗಿದ್ದು, ನ್ಯಾಯಾಧೀಶರು ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.