ಬೆಂಗಳೂರು: ಕಸ್ತೂರಿ ರಂಗನ್ ವರದಿ ಜಾರಿಯಿಂದ ಪಶ್ಚಿಮಘಟ್ಟದ ನಾಗರಿಕರ ಬದುಕು ಬೀದಿಗೆ ಬರಲಿದೆ ಎಂಬ ವಿಚಾರವನ್ನು ರಾಜ್ಯ ಸರ್ಕಾರ ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಕಸ್ತೂರಿ ರಂಗನ್ ವರದಿ ಅತ್ಯಂತ ಸೂಕ್ಷ್ಮ ವಿಚಾರ. ಈ ವರದಿ ಅನುಷ್ಠಾನಗೊಂಡರೆ ಪಶ್ಚಿಮ ಘಟ್ಟದ ಬಹುತೇಕರ ಬದುಕು ಬೀದಿಗೆ ಬರಲಿದೆ. ನಮ್ಮ ಸರ್ಕಾರವಿದ್ದಾಗಲೂ ವರದಿ ಜಾರಿಗೆ ಒತ್ತಡ ಬಂದಿತ್ತು. ಆದರೆ ಕೆಲ ಲೋಪಗಳ ಆಧಾರದಲ್ಲಿ ನಾವು ಅದಕ್ಕೆ ಒಪ್ಪಿರಲಿಲ್ಲ. ಈ ವಿಚಾರದಲ್ಲಿ ರಾಜ್ಯ ತನ್ನ ನಿಲುವನ್ನು ಕೇಂದ್ರಕ್ಕೆ ಪರಿಣಾಮಕಾರಿಯಾಗಿ ಮನವರಿಕೆ ಮಾಡಿಕೊಡಬೇಕು ಎಂದು ಸಲಹೆ ನೀಡಿದ್ದಾರೆ.