ಕರ್ನಾಟಕ

karnataka

ETV Bharat / state

ಧ್ವಜ ಸಂಹಿತೆ ಹೆಸರಿನಲ್ಲಿ ನಾಡಧ್ವಜದ ಅಸ್ಮಿತೆ ಕಾಯ್ದುಕೊಳ್ಳದ ಸರ್ಕಾರ:  ಗುಂಡೂರಾವ್​ ಆಕ್ರೋಶ - ನಾಡಧ್ವಜದ ಕುರಿತು ನಾಯಕರು ಸಿಡಿಮಿಡಿ

ನಾಡಧ್ವಜದ ಬದಲು ರಾಷ್ಟ್ರಧ್ವಜ ಹಾರಿಸಲು ಸೂಚನೆ ನೀಡಿರುವ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್​​ ನಾಯಕರು ಸಿಡಿಮಿಡಿಗೊಂಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್

By

Published : Nov 1, 2019, 7:36 AM IST

ಬೆಂಗಳೂರು: ರಾಜ್ಯೋತ್ಸವ ಸಂದರ್ಭದಲ್ಲಿ ನಾಡಧ್ವಜದ ಬದಲು ರಾಷ್ಟ್ರಧ್ವಜ ಹಾರಿಸಲು ಸೂಚನೆ ನೀಡಿರುವ ರಾಜ್ಯ ಸರ್ಕಾರದ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಟ್ವೀಟ್ ಮೂಲಕ ತಮ್ಮ ಬೇಸರ ಹೊರಹಾಕಿರುವ ಅವರು, ಧ್ವಜ ಸಂಹಿತೆ ಹೆಸರಿನಲ್ಲಿ ಜನ ಮಾನಸದಲ್ಲಿ ದಶಕಗಳಿಂದ ನೆಲೆಯೂರಿದ ಕನ್ನಡದ ಅಸ್ಮಿತೆಯ ಪ್ರತಿಬಿಂಬವಾದ ನಾಡಧ್ವಜ ಹಾರಾಟಕ್ಕೆ ಅವಕಾಶ ನೀಡದೇ ಇರುವ ಮೂಲಕ ಬಿಜೆಪಿ ಸರ್ಕಾರ ಕನ್ನಡಿಗರ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ. ಕರ್ನಾಟಕದಲ್ಲಿ ನಾಡಧ್ವಜವಲ್ಲದೇ ಭಗವಾಧ್ವಜ ಹಾರಿಸಬೇಕೆ ? ಎಂದು ಪ್ರಶ್ನಿಸಿದ್ದಾರೆ.

ಸರ್ಕಾರದ ನಿಲುವಿನ ಬಗ್ಗೆ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಇದರ ಬೆನ್ನಲ್ಲೇ ಹಲವು ಕಾಂಗ್ರೆಸ್ ನಾಯಕರು ಸರ್ಕಾರದ ನಿಲುವಿನ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ABOUT THE AUTHOR

...view details