ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯ ಚಟುವಟಿಕೆಯಲ್ಲಿ ರಾಜ್ಯ ಸರ್ಕಾರ ಅನಗತ್ಯವಾಗಿ ಮೂಗು ತೂರಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ಕಸಾಪ ಚಟುವಟಿಕೆಯಲ್ಲಿ ಸರ್ಕಾರ ಮೂಗು ತೂರಿಸುವುದು ಬೇಡ: ದಿನೇಶ್ ಗುಂಡೂರಾವ್ - ದಿನೇಶ್ ಗುಂಡೂರಾವ್ ಟ್ವೀಟ್
ಕನ್ನಡ ಸಾಹಿತ್ಯ ಪರಿಷತ್ ಕಾರ್ಯ ಚಟುವಟಿಕೆಯಲ್ಲಿ ರಾಜ್ಯ ಸರ್ಕಾರ ಅನಗತ್ಯವಾಗಿ ಮೂಗು ತೂರಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.
ದಿನೇಶ್ ಗುಂಡೂರಾವ್
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕನ್ನಡ ಸಾಹಿತ್ಯ ಸಮ್ಮೇಳನಗಳ ವಿಷಯದಲ್ಲಿ ಸರ್ಕಾರವೇ ಅಡ್ಡಿಪಡಿಸುತ್ತಿರುವುದು ಖಂಡನೀಯ. ಚಿಕ್ಕಮಗಳೂರು ಹಾಗೂ ರಾಮನಗರ ಸಮ್ಮೇಳನಾಧ್ಯಕ್ಷರ ಆಯ್ಕೆಯ ಬಗ್ಗೆ ಹಿಂದುತ್ವವಾದಿಗಳು ಮೂಗು ತೂರಿಸುತ್ತಿರುವುದು ನಮ್ಮ ವಿಶಾಲ ವಿಚಾರಧಾರೆಯ ಸಾಹಿತ್ಯಕ್ಕೆ ಅಪಮಾನ. ಕನ್ನಡ ಸಾಹಿತ್ಯ ಪರಿಷತ್ ಸ್ವತಂತ್ರವಾಗಿ ನಡೆಯಲು ಬಿಡಬೇಕು ಎಂದು ಆಗ್ರಹಿಸಿದ್ದಾರೆ.