ಬೆಂಗಳೂರು: ಚೀನಾ ವಿಚಾರದಲ್ಲಿ ಕೇಂದ್ರ ಸರ್ಕಾರ ಹೇಡಿತನ ಪ್ರದರ್ಶಿಸುತ್ತಿದ್ದು, ಭಾರತೀಯ ಯೋಧರಿಗೆ ಅವಮಾನ ಮಾಡುತ್ತಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಟ್ವೀಟ್ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವ ಅವರು, ವಾಸ್ತವಿಕ ಗಡಿ ರೇಖೆಯನ್ನು ದಾಟಿ ಭಾರತದ ನೆಲಕ್ಕೆ ಕಾಲಿಟ್ಟಿರುವ ಚೀನಾ, ತನ್ನ ಸೈನಿಕರನ್ನು ವಾಪಸ್ ಕರೆಸಿಕೊಂಡಿಲ್ಲ. ಆದರೆ, ಪ್ರಧಾನಿ ಮೋದಿ ಚೀನಾದೊಂದಿಗಿನ ಗಡಿ ಸಂಘರ್ಷದ ಬಗ್ಗೆ ಸುಳ್ಳು ಹೇಳುತ್ತಾ ಜನರ ಹಾದಿ ತಪ್ಪಿಸುತ್ತಿದ್ದಾರೆ. ಚೀನಾ ನಮ್ಮ ಭೂಮಿಯನ್ನು ಅಕ್ರಮಿಸಿಕೊಂಡು ಇಲ್ಲೇ ನೆಲೆ ನಿಂತಿದ್ದರೂ, ಮೋದಿಯವರ ಮೌನದ ಅರ್ಥ ಶರಣಾಗತಿಯೇ? ಎಂದಿದ್ದಾರೆ.