ಬೆಂಗಳೂರು:ತಮ್ಮ ಪುತ್ರಿಗೆ ಕೊರೊನಾ ಸೋಂಕು ತಗುಲಿದೆ ಎನ್ನುವ ಮಾತು ಸತ್ಯಕ್ಕೆ ದೂರವಾದದ್ದು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ.
ಪುತ್ರಿಗೆ ಕೊರೋನಾ ಸೋಂಕು ತಗುಲಿದೆ ಎನ್ನುವ ಮಾತು ಸತ್ಯಕ್ಕೆ ದೂರವಾದದ್ದು: ದಿನೇಶ್ ಗುಂಡೂರಾವ್ - Dinesh gundurao tweet
ತಮ್ಮ ಪುತ್ರಿಗೆ ಕೊರೊನಾ ಸೋಂಕು ತಗುಲಿದೆ ಎನ್ನುವ ಬಗ್ಗೆ ಮಾಧ್ಯಮಗಳಲ್ಲಿ ಅನಗತ್ಯ ಸುಳ್ಳು ವದಂತಿ ಹರಿದಾಡುತ್ತಿದೆ. ಸತ್ಯಕ್ಕೆ ದೂರವಾದದ್ದು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ದಿನೇಶ್ ಗುಂಡೂರಾವ್ ಟ್ವೀಟ್
ಈ ವಿಚಾರವಾಗಿ ಮಾಧ್ಯಮಗಳ ಮೂಲಕ ಅನಗತ್ಯ ಸುಳ್ಳು ವದಂತಿ ಹರಿದಾಡುತ್ತಿದೆ ಎಂದು ಟ್ವೀಟ್ ಮೂಲಕ ತಿಳಿಸಿರುವ ಅವರು, ಮಾರ್ಚ್ 16ರಂದು ಲಂಡನ್‌ನಿಂದ ಮರಳಿದ ನನ್ನ ಮಗಳು ಆರೋಗ್ಯವಾಗಿದ್ದಾಳೆ. ಕೋವಿಡ್ ಪಾಸಿಟಿವ್ ಬಂದಿದೆ ಎಂದು ಕೆಲ ಟಿವಿ ಚಾನೆಲ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ವದಂತಿ ಹರಿದಾಡುತ್ತಿದೆ. ಇದು ಸುಳ್ಳು, ಒಂದು ವೇಳೆ ನಿಜವಾಗಿದ್ದರೆ ಅದನ್ನು ಒಪ್ಪಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಮಾಧ್ಯಮಗಳು ಜವಾಬ್ದಾರಿಯುತವಾಗಿರಬೇಕು, ತಪ್ಪಾಗಿ ಮಾಹಿತಿ ನೀಡಬಾರದು ಎಂದು ಕೂಡ ಅವರು ಟ್ವೀಟ್ನಲ್ಲಿ ಮನವಿ ಮಾಡಿದ್ದಾರೆ.
Last Updated : Mar 26, 2020, 11:27 PM IST