ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗಿರುವ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರನ್ನು ನಾಲ್ಕು ಗಂಟೆಗಳಿಂದ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಸಂತ್ರಸ್ತೆ ಯುವತಿಯ ಪರಿಚಯ ಹೇಗೆ, ಕುಟುಂಬಸ್ಥರು ಅಥವಾ ಸಂಬಂಧಿಕರೇ ನಿಜವಾಗಿಯೂ ಸಿಡಿ ನೀಡಿದ್ದಾರಾ. ಹೀಗೆ ಎಲ್ಲಾ ಆಯಾಮಗಳಲ್ಲಿ ಪೊಲೀಸ್ ಇನ್ಸ್ಸ್ಪೆಕ್ಟರ್ ಮಾರುತಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.