ಬೆಂಗಳೂರು: ಕೊರೊನಾ ಹರಡುವಿಕೆ ಹೆಚ್ಚಾದ ಹಿನ್ನೆಲೆಯಲ್ಲಿ, ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಇದೇ ಜುಲೈ 15 ರಿಂದ ಆಗಸ್ಟ್ 5 ರವರೆಗೆ ಪರೀಕ್ಷಾ ದಿನಾಂಕ ನಿಗದಿ ಮಾಡಲಾಗಿತ್ತು.
ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳು ಮುಂದೂಡಿಕೆ..! - ತಾಂತ್ರಿಕ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳ ಸುತ್ತೋಲೆ
ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ದಿನಗಳಲ್ಲಿ ಪರೀಕ್ಷೆಯ ಕುರಿತು ಮಾಹಿತಿ ನೀಡಲಾಗುವುದು ಎಂದು ಸೂಚಿಸಲಾಗಿದೆ.
ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗಳು ಮುಂದೂಡಿಕೆ
ಆದರೆ ಶಾಲಾ- ಕಾಲೇಜು, ಶಿಕ್ಷಣ ಸಂಸ್ಥೆಗಳು, ಕೋಚಿಂಗ್ ಸೆಂಟರ್ ಜುಲೈ 31 ರವರಗೆ ತೆರಯದಂತೆ ಸರ್ಕಾರ ಆದೇಶಿಸಿರುವ ಕಾರಣ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಪರೀಕ್ಷೆಗಳನ್ನು ಮುಂದೂಡಲು ಆದೇಶಿಸಿದ್ದಾರೆ.
ಇದೀಗ ಡಿಪ್ಲೋಮಾದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ದಿನಗಳಲ್ಲಿ ಪರೀಕ್ಷೆಯ ಕುರಿತು ಮಾಹಿತಿ ನೀಡಲಾಗುವುದು ಎಂದು ಸೂಚಿಸಲಾಗಿದೆ.