ಕರ್ನಾಟಕ

karnataka

ETV Bharat / state

ತಮಿಳುನಾಡು ಮಾದರಿಯಲ್ಲಿ ತೈಲದ ಮೇಲಿನ ಸೆಸ್ ಕಡಿತ: ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಎಂದ ಬೈರತಿ ಬಸವರಾಜ್ - ತಮಿಳುನಾಡು ಮಾದರಿಯಲ್ಲಿ ತೈಲದ ಮೇಲಿನ ಸೆಸ್ ಕಡಿತ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ

ತಮಿಳುನಾಡು ಮಾದರಿಯಲ್ಲಿಯೇ ತೈಲದ ಮೇಲಿನ ಸೆಸ್ ಕಡಿಮೆ ಮಾಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ ಎಂದು ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.

ಬೈರತಿ ಬಸವರಾಜ
ಬೈರತಿ ಬಸವರಾಜ

By

Published : Sep 3, 2021, 2:21 PM IST

ಬೆಂಗಳೂರು: ತಮಿಳುನಾಡು ಮಾದರಿಯಲ್ಲಿಯೇ ತೈಲದ ಮೇಲಿನ ಸೆಸ್ ಕಡಿಮೆ ಮಾಡುವ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದು ಸಚಿವ ಬೈರತಿ ಬಸವರಾಜ್ ಹೇಳಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್- ಡಿಸೇಲ್ ಬೆಲೆ ಏರಿಕೆ ನಂತರ ರಾಜ್ಯದಲ್ಲಿಯೂ ಸೆಸ್ ಇಳಿಕೆ ಕೂಗು ಕೇಳಿ ಬರುತ್ತಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇವೆ. ಬೆಲೆ ಏರಿಕೆ ವಿಚಾರದ ಬಗ್ಗೆ ಪ್ರಸ್ತಾಪ ಮಾಡಲಿದ್ದು, ಪರಿಹಾರದ ಬಗ್ಗೆ ಚರ್ಚಿಸುತ್ತೇವೆ ಎಂದರು.

ತಮಿಳುನಾಡು ಮಾದರಿಯಲ್ಲಿ ಪೆಟ್ರೋಲ್ ಮೇಲಿನ ಸೆಸ್ ಇಳಿಕೆ ಬಗ್ಗೆಯೂ ಚರ್ಚೆ ಮಾಡುತ್ತೇವೆ. ನಮ್ಮ ಮುಖ್ಯಮಂತ್ರಿಗಳು ಅನುಭವಿ ಹಾಗೂ ಸಮರ್ಥರಿದ್ದಾರೆ. ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿರುದ್ಧ ಭ್ರಷ್ಟಾಚಾರ ಆರೋಪ: ದಾಖಲೆ ಬಿಡುಗಡೆ ಮಾಡಿದ ಶಾಸಕ ಸಾ.ರಾ.ಮಹೇಶ್

ಗಣೇಶೋತ್ಸವ ಮಾಡಬೇಕು ಎಂದು ಸಂಘ ಸಂಸ್ಥೆಗಳ ಒತ್ತಾಯವೂ ಇದೆ. ಸೆಪ್ಟೆಂಬರ್ 5ರಂದು ಸಿಎಂ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅಂದಿನ ನಿರ್ಧಾರಕ್ಕೆ ನಾವು ಬದ್ಧವಾಗಿರುತ್ತೇವೆ. ಮೆರವಣಿಗೆ ಅವಶ್ಯಕತೆ ಇಲ್ಲ. ಗಣೇಶ ಪ್ರತಿಷ್ಠಾಪನೆ ಮಾಡಿ, ನಮನ ಸಲ್ಲಿಸಲು ಅವಕಾಶ ಕೊಟ್ಟರೆ ಸಾಕು ಎಂದರು.

ABOUT THE AUTHOR

...view details