ಬೆಂಗಳೂರು:ಜೆಬಿಎಂ (ಜಮಾತ್ ಉಲ್ ಮುಜಾಹಿದ್ದೀನ್) ಸಂಘಟನೆ ನಗರದಲ್ಲಿ ಸಕ್ರಿಯವಾಗಿದೆ ಎಂದು ದೆಹಲಿ ಎನ್ಐಎ ಮಾಹಿತಿ ನೀಡಿದ ಬೆನ್ನಲ್ಲೇ ರಾಜ್ಯ ಗೃಹ ಇಲಾಖೆ ಎಚ್ಚೆತ್ತುಕೊಂಡಿದೆ. ಹೀಗಾಗಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಗರ ಪೊಲೀಸ್ ಆಯುಕ್ತ ಹಾಗೂ ಹಿರಿಯ ಅಧಿಕಾರಿಗಳ ಜೊತೆ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರಲ್ಲಿ ಎಟಿಎಸ್ ತಂಡ ರಚನೆಗೆ ಪೊಲೀಸ್ ಆಯುಕ್ತರೊಂದಿಗೆ ಬಸವರಾಜ ಬೊಮ್ಮಾಯಿ ಚರ್ಚೆ - ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ಉಗ್ರರಿಂದ ರಕ್ಷಣೆಯ ದೃಷ್ಟಿಯಿಂದ ಬೆಂಗಳೂರು ವ್ಯಾಪ್ತಿಗೆ ಸೀಮಿತವಾಗಿ ಎಟಿಎಸ್ (ಉಗ್ರ ಚಟುವಟಿಕೆ ನಿಗ್ರಹ ದಳ) ರಚನೆ ಮಾಡಲು ಸರ್ಕಾರ ಮುಂದಾಗಿದ್ದು, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಚರ್ಚೆ ನಡೆಸಿದ್ದಾರೆ.
ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ನಗರವನ್ನು ಉಗ್ರರಿಂದ ರಕ್ಷಣೆ ದೃಷ್ಟಿಯಿಂದ ಬೆಂಗಳೂರು ವ್ಯಾಪ್ತಿಗೆ ಸೀಮಿತವಾಗಿ ಎಟಿಎಸ್ (ಉಗ್ರ ಚಟುವಟಿಕೆ ನಿಗ್ರಹ ದಳ) ರಚನೆ ಮಾಡಲು ಮುಂದಾಗಿದ್ದು, ಈ ತಂಡದಲ್ಲಿ ಈಗಾಗಲೇ ಭಯೋತ್ಪಾದನೆ ವಿರುದ್ಧ ಕೆಲಸ ಮಾಡಿರುವ ಹಿರಿಯ ಅಧಿಕಾರಿಗಳನ್ನು ನೇಮಕ ಮಾಡಲು ಈಗಾಗಲೇ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಎಟಿಎಸ್ ಟೀಂ ಚೆನ್ನೈ, ಹೈದರಾಬಾದ್, ಮುಂಬೈ ಮತ್ತು ದೆಹಲಿ ನಗರದಲ್ಲಿ ಇದ್ದು, ಅದೇ ಮಾದರಿಯಲ್ಲಿ ನಗರದಲ್ಲಿ ಎಟಿಎಸ್ ರಚನೆಗೆ ಸರ್ಕಾರ ಮುಂದಾಗಿದೆ.