ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಇತರ ಹಿಂದುಳಿದ ವರ್ಗಗಳ ಮೀಸಲಾತಿ ಹೆಚ್ಚಳ ಕುರಿತಂತೆ ಇನ್ನೊಂದು ವಾರದಲ್ಲಿ ಸರ್ವಪಕ್ಷ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸಭೆಯಲ್ಲಿ ಶುಕ್ರವಾರ ತಿಳಿಸಿದ್ದಾರೆ.
ಸರ್ವ ಪಕ್ಷ ಸಭೆ ಕರೆದು ಚರ್ಚೆ:ಜೆಡಿಎಸ್ ಶಾಸಕರ ಧರಣಿ ನಡುವೆ ಸ್ವಯಂ ಹೇಳಿಕೆ ನೀಡಿದ ಸಿಎಂ, ಮೀಸಲಾತಿ ಕುರಿತಂತೆ ನ್ಯಾಯಮೂತಿ೯ ನಾಗಮೋಹನ್ ದಾಸ್ ಸಮಿತಿ ಮತ್ತು ನ್ಯಾಯಮೂತಿ೯ ಸುಭಾಷ್ ಅಡಿ ಅವರ ಸಮಿತಿ ವರದಿಗಳು ಸಲ್ಲಿಕೆಯಾಗಿವೆ. ಸಂವಿಧಾನ ಮತ್ತು ಕಾನೂನಾತ್ಮಕ ವಿಚಾರವಾಗಿದೆ. ಈ ಸಂಬಂಧ ಸರ್ವ ಪಕ್ಷ ಸಭೆ ಕರೆದು ಚಚೆ೯ ಮಾಡಿ ಮುಂದಿನ ಹೆಜ್ಜೆಗಳನ್ನು ಇಡಬೇಕು.
ಪ್ರತಿಪಕ್ಷದ ನಾಯಕರೊಂದಿಗೆ ಮಾತನಾಡಿ ದಿನಾಂಕ ನಿಗದಿ ಪಡಿಸಲಾಗುವುದು. ಎಸ್ಸಿ,ಎಸ್ಟಿ, ಒಬಿಸಿ ವಿಚಾರದಲ್ಲಿ ಆಯಾ ಜನಾಂಗಕ್ಕೆ ನ್ಯಾಯ ಕೊಡಿಸಲು, ಅವರ ಜನಸಂಖ್ಯೆಗೆ ತಕ್ಕಂತೆ ಮೀಸಲಾತಿ ಕೊಡಿಸಲು ಸರ್ಕಾರ ಬದ್ಧವಾಗಿದೆ. ಅವರ ಭಾವನೆಗಳಿಗೆ ಸ್ಪಂಧಿಸುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.
ಸತ್ಯಾಗ್ರಹ ಕೈಬಿಡುವಂತೆ ಮನವಿ:ಕಾನೂನಾತ್ಮಕವಾಗಿ ಮುಂದುವರೆಯುವ ಬಗ್ಗೆ ಮುಂದಿನ ಹೆಜ್ಜೆ ಇಡುವ ಬಗ್ಗೆ ಸರ್ವ ಪಕ್ಷಗಳ ಸಭೆಯಲ್ಲಿ ತೀರ್ಮಾನಿಸಲಾಗುವುದು. ಬಹುದಿನಗಳ ಬೇಡಿಕೆಗೆ ನ್ಯಾಯ ಒದಗಿಸಲು ಸರ್ವ ಪಕ್ಷದ ಸಭೆ ಕರೆಯಲಾಗುತ್ತಿದೆ. ಹೀಗಾಗಿ ಸತ್ಯಾಗ್ರಹ ಮಾಡುತ್ತಿರುವುದನ್ನು ವಾಲ್ಮೀಕಿ ಸಮುದಾಯದ ಸ್ವಾಮೀಜಿ ಕೈ ಬಿಡಬೇಕು ಎಂದು ಮನವಿ ಮಾಡಿದರು.