ಕರ್ನಾಟಕ

karnataka

ETV Bharat / state

ದೇವೇಗೌಡರ ವಿರುದ್ಧ ಅವಹೇಳನಕಾರಿ FB ಪೋಸ್ಟ್ : ಇಬ್ಬರ ಬಂಧನ - kannadanews

ಫೇಸ್‌ಬುಕ್‌ನಲ್ಲಿ ಜೆಡಿಎಸ್ ವರಿಷ್ಠರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಇಬ್ಬರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಫೇಸ್ ಬುಕ್ ನಲ್ಲಿ ಜೆಡಿಎಸ್ ವರಿಷ್ಠರ ವಿರುದ್ಧ ಅವಹೇಳನಕಾರಿ ಪೋಸ್ಟ್

By

Published : Jun 8, 2019, 8:45 PM IST

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಪೋಸ್ಟ್ ಮಾಡಿದ ಆರೋಪ ಮೇರೆಗೆ ಇಬ್ಬರು ಆರೋಪಿಗಳನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ.

ರಾಮನಗರದ‌ ಮೂಲದ ಸಿದ್ದರಾಜು ಹಾಗೂ ಜಾಮರಾಜು ಬಂಧಿತ ಆರೋಪಿಗಳು.

ಮೇ 23 ರಂದು ಲೋಕಸಭಾ ಚುನಾವಣೆ ಫಲಿತಾಂಶದ ದಿನ ಫೇಸ್ ಬುಕ್ ಲೈವ್ ಮಾಡಿದ್ದ ಆರೋಪಿಗಳು ಹೆಚ್.ಡಿ.ದೇವೇಗೌಡ, ಸಿಎಂ ಹೆಚ್.ಡಿ‌.ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಸಂಬಂಧ ಲೋಕೇಶ್ ಎಂಬುವವರು ಹೈಗ್ರೌಂಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ರಾಮನಗರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.

ABOUT THE AUTHOR

...view details