ಬೆಂಗಳೂರು:ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ಗೊಂಡು ರಾಜೀನಾಮೆ ನೀಡಿ ಅನರ್ಹ ಗೊಂಡಿದ್ದ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್, ಸಿದ್ದಾರ್ಥ್ ಅಂತ್ಯಕ್ರಿಯಲ್ಲಿ ಭಾಗವಹಿಸಲು ಚಿಕ್ಕಮಗಳೂರಿಗೆ ತೆರಳಿದ್ದಾರೆ.
ಸಿದ್ದಾರ್ಥ್ ಅಂತ್ಯಕ್ರಿಯೆಗೆ ಹೊರಟ ಅನರ್ಹ ಶಾಸಕ ಸುಧಾಕರ್ - ಅನರ್ಹ ಶಾಸಕ ಸುಧಾಕರ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಅನರ್ಹ ಗೊಂಡಿರುವ ಚಿಕ್ಕಬಳ್ಳಾಪುರದ ಅನರ್ಹ ಶಾಸಕ ಸುಧಾಕರ್ ಚಿಕ್ಕಮಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಅನರ್ಹ ಶಾಸಕ ಸುಧಾಕರ್
ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನ ಗೊಂಡು ರಾಜೀನಾಮೆ ನೀಡಿದ್ದ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ರಾಜೀನಾಮೆ ನೀಡಿದ್ದ ಬಳಿಕ ಎಲ್ಲೂ ಕಾಣಿಸಿಕೊಂಡಿಲ್ಲ. ಸ್ಪೀಕರ್ ಅನರ್ಹಗೊಳಿಸಿದ್ರೂ ಕಾಣಿಸಿಕೊಳ್ಳದ ಸುಧಾಕರ್, ಮಾಜಿ ಸಿಎಂ ಎಸ್ ಎಂ ಕೃಷ್ಣ ಅಳಿಯ ವಿ.ಜಿ.ಸಿದ್ದಾರ್ಥ್ ಅವರ ಅಂತಿಮ ದರ್ಶನ ಪಡೆಯಲು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ರು.
ದೆಹಲಿಯಿಂದ 1 ಗಂಟೆ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು, ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೇ ಚಿಕ್ಕಮಗಳೂರಿಗೆ ಹೋಗ್ತಾ ಇದ್ದಿನಿ ಅಂತ ಹೇಳಿ ತರಾತುರಿಯಲ್ಲಿ ಕಾರು ಹತ್ತಿ ಹೊರಟಿದ್ದಾರೆ.