ಕರ್ನಾಟಕ

karnataka

ETV Bharat / state

ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ.. ಮಾಜಿ ಸಿಎಂ ಹೆಚ್​ಡಿಕೆ ಖಂಡನೆ..

ಕೇಂದ್ರ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಭದ್ರಾವತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಲಾಗಿತ್ತು. ಈ ಕುರಿತ ಆಕ್ಷೇಪಗಳಿಗೆ ಉತ್ತರಿಸಿದ್ದ ಕೇಂದ್ರ, ಕನ್ನಡ ಕಡ್ಡಾಯವಲ್ಲ ಎಂದಿತ್ತು. ಇದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕಹಿ ನೆನಪು ಮರೆಯುವ ಮೊದಲೇ ಬೆಂಗಳೂರಿನಲ್ಲಿ ಕನ್ನಡಕ್ಕೆ ಅಪಚಾರ ಮಾಡಲಾಗಿದೆ. ಇದು ಅತ್ಯಂತ ನೋವಿನ ಸಂಗತಿ..

disrespect-to-kannada-language-in-karnataka-h-d-kumaraswamy
ಹೆಚ್​ಡಿಕೆ

By

Published : Feb 3, 2021, 7:39 PM IST

ಬೆಂಗಳೂರು :ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ. ತ್ರಿಭಾಷಾ ಸೂತ್ರ ಮರೆಯಲಾಗಿದೆ.

ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ವೇದಿಕೆಯಲ್ಲಿ ರಾರಾಜಿಸುತ್ತಿವೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಎಸಗಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಭದ್ರಾವತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಲಾಗಿತ್ತು. ಈ ಕುರಿತ ಆಕ್ಷೇಪಗಳಿಗೆ ಉತ್ತರಿಸಿದ್ದ ಕೇಂದ್ರ, ಕನ್ನಡ ಕಡ್ಡಾಯವಲ್ಲ ಎಂದಿತ್ತು.

ಇದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕಹಿ ನೆನಪು ಮರೆಯುವ ಮೊದಲೇ ಬೆಂಗಳೂರಿನಲ್ಲಿ ಕನ್ನಡಕ್ಕೆ ಅಪಚಾರ ಮಾಡಲಾಗಿದೆ. ಇದು ಅತ್ಯಂತ ನೋವಿನ ಸಂಗತಿ ಎಂದು ಹೇಳಿದ್ದಾರೆ.

ಓದಿ:ವಂಚಕ ಯುವರಾಜ್ ಜೊತೆ ಹಣದ ವ್ಯವಹಾರ: ರಾಧಿಕಾ ಕುಮಾರಸ್ವಾಮಿಗೆ ಮತ್ತೆ ಎದುರಾಗುತ್ತಾ ಸಂಕಷ್ಟ?

ರಕ್ಷಣಾ‌‌‌ ಸಚಿವ ರಾಜನಾಥ್‌ ಸಿಂಗ್ ಯಲಹಂಕದ‌ ಏರ್‌ಫೋರ್ಸ್ ಸ್ಟೇಷನ್‌ನಲ್ಲಿ ಆಯೋಜಿಸಿರುವ ಏರೋ ಇಂಡಿಯಾ ಕಾರ್ಯಕ್ರಮ‌ ಉದ್ಘಾಟಿಸಿದ್ದರು. ಇದೇ ಸಂದರ್ಭದಲ್ಲಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರೂ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದರು. ಅಲ್ಲಿದ್ದ ರಾಜ್ಯದ ಹಲವು ನಾಯಕರಿಗೆ ಕನ್ನಡಕ್ಕಾದ ಅಪಮಾನ ಕಾಣಲಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ABOUT THE AUTHOR

...view details