ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಬಗ್ಗೆ ಅವಹೇಳನಕಾರಿಯಾಗಿ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ. ಈ ಹಿನ್ನೆಲೆ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಜಯರಾಜ್ ನಾಯ್ಡು ದೂರು ದಾಖಲಿಸಿದ್ದಾರೆ.
ಸುಧಾಮೂರ್ತಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿಗಳ ವಿರುದ್ಧ ಕೇಸ್ - bengaluru News
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಬಗ್ಗೆ ವೆಬ್ ಸಿರೀಸ್ವೊಂದರಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದು, ಈ ಕುರಿತು ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸುಧಾಮೂರ್ತಿ
ವೆಬ್ ಸೀರಿಸ್ನಲ್ಲಿ ಬರುವ ಸನ್ನಿವೇಶವನ್ನು ಬದಲಿಸಿ ಸುಧಾಮೂರ್ತಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವುದು ವಿಡಿಯೋದಲ್ಲಿದೆ.
ಹೀಗಾಗಿ ಓಲ್ಡ್ ಟೌನ್ ಕ್ರಿಮಿನಲ್ಸ್ ವೆಬ್ ಸೀರಿಸ್ ನಿರ್ದೇಶಕ ಅಮರ್ ಹಾಗೂ ನಿರ್ಮಾಪಕರ ವಿರುದ್ಧ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.