ಬೆಂಗಳೂರು : ಪಾದರಾಯನಪುರದಲ್ಲಿ ಆರೋಗ್ಯಾಧಿಕಾರಿಗಳು ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ದಾಳಿ ನಡೆಸಿದ ಪ್ರಕರಣ ಮಾಸುವ ಮುನ್ನವೇ, ಪೌರ ಕಾರ್ಮಿಕರ ಕೆಲಸಕ್ಕೆ ಅಡ್ಡಿಪಡಿಸಿ ಘಟನೆ ನಡೆದಿದೆ.
ಪೌರ ಕಾರ್ಮಿಕರ ಕೆಲಸಕ್ಕೆ ಅಡ್ಡಿ : ಆರೋಪಿಯಿಂದ ಮುಚ್ಚಳಿಕೆ ಬರೆಸಿಕೊಂಡ ಪೊಲೀಸರು - ಪೌರ ಕಾರ್ಮಿಕರ ಕೆಲಸಕ್ಕೆ ಅಡ್ಡಿ
ಬೆಂಗಳೂರಿನ ಯಶವಂತಪುರದ ಬಿ.ಕೆ.ನಗರ ಪ್ರದೇಶದಲ್ಲಿ ಕೊರೊನಾ ಹರಡದಂತೆ ತಡೆಯಲು ಮನೆ ಮನೆಗೆ ಔಷಧ ಸಿಂಪಡನೆ ಮಾಡುತ್ತಿದ್ದ ಪೌರ ಕಾರ್ಮಿಕರಿಗೆ ವ್ಯಕ್ತಿಯೊಬ್ಬ ಆವಾಜ್ ಹಾಕಿ ಕೆಲಸಕ್ಕೆ ಅಡ್ಡಿಪಡಿಸಿದ ಘಟನೆ ನಡೆದಿದೆ.
ಯಶವಂತಪುರದ ಬಿ.ಕೆ.ನಗರ ಪ್ರದೇಶದಲ್ಲಿ ಕೊರೊನಾ ಹರಡದಂತೆ ತಡೆಯಲು ಉದಯ್ ಕುಮಾರ್ ಹಾಗೂ ಮುರುಳಿ ಎಂಬ ಪೌರ ಕಾರ್ಮಿಕರು ವಾಹನದ ಮೂಲಕ ಮನೆ ಮನೆಗೆ ಔಷಧ ಸಿಂಪಡಣೆ ಮಾಡುತ್ತಿದ್ದರು. ಈ ವೇಳೆ ಸುಫಿಯಾನ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೆಲಸಕ್ಕೆ ಅಡ್ಡಿಪಡಿಸಿದ್ದಾನೆ ಎನ್ನಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿ ಸುಫಿಯಾನ್ನನ್ನು ವಶಕ್ಕೆ ಪಡೆದು ಮುಚ್ಚಳಿಕೆ ಬರೆಯಿಸಿ ಬಿಟ್ಟು ಕಳಿಸಿದ್ದಾರೆ.
ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಪೌರ ಕಾರ್ಮಿಕರು ಬೆಳಗ್ಗೆ 9 ಗಂಟೆಯಿಂದ ಕೊರೊನಾ ಸಂಬಂಧ ಕೆಲಸ ಮಾಡುತ್ತಿದ್ದೇವೆ. ಮಧ್ಯಾಹ್ನ ಸರಿಯಾಗಿ ಊಟ ಕೂಡ ಮಾಡಲು ಸಾಧ್ಯವಾಗೋದಿಲ್ಲ. ಇದರ ನಡುವೆ ಇಂತಹವರು ಆವಾಜ್ ಹಾಕ್ತಾರೆ. ನಮಗೆ ರಕ್ಷಣೆಯಿಲ್ಲ. ನಾವು ಜೀವ ಭಯದ ನಡುವೆ ಕೆಲಸ ಮಾಡಬೇಕು. ನಮಗೂ ಪೊಲೀಸ್ ಭದ್ರತೆ ಕೊಡಿ ಎಂದು ಅಳಲು ತೋಡಿಕೊಂಡಿದ್ದಾರೆ.
TAGGED:
ಪೌರ ಕಾರ್ಮಿಕರ ಕೆಲಸಕ್ಕೆ ಅಡ್ಡಿ