ಬೆಂಗಳೂರು: ಇಲ್ಲಿಯವರೆಗೆ ರಾಜೀನಾಮೆ ನೀಡಿರುವ ಶಾಸಕರೂ ಸೇರಿದಂತೆ 20 ಶಾಸಕರು ಇಂದು ಸದನಕ್ಕೆ ಗೈರು ಹಾಜರಿಯಾಗಿದ್ದರು.
ಇಂದು ಸದನಕ್ಕೆ ಅತೃಪ್ತರು ಸೇರಿ 20 ಶಾಸಕರು ಗೈರು! - ಬೆಂಗಳೂರು
ಇಲ್ಲಿಯವರೆಗೆ ರಾಜೀನಾಮೆ ನೀಡಿರುವ ಶಾಸಕರೂ ಸೇರಿದಂತೆ 20 ಶಾಸಕರು ಇಂದು ಸದನಕ್ಕೆ ಗೈರು ಹಾಜರಿಯಾಗಿದ್ದರು. ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ಸೂಚಿಸಿರುವ ಬಿಎಸ್‍ಪಿ ಶಾಸಕ ಎನ್.ಮಹೇಶ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಗೇಂದ್ರ ಮತ್ತು ಶ್ರೀಮಂತ್ ಪಾಟೀಲ್ ಹಾಗೂ ಇಬ್ಬರು ಪಕ್ಷೇತರ ಶಾಸಕರು ಸದನಕ್ಕೆ ಹಾಜರಾಗಿರಲಿಲ್ಲ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರಕ್ಕೆ ಬೆಂಬಲ ಸೂಚಿಸಿರುವ ಬಿಎಸ್‍ಪಿ ಶಾಸಕ ಎನ್.ಮಹೇಶ್, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಗೇಂದ್ರ ಮತ್ತು ಶ್ರೀಮಂತ್ ಪಾಟೀಲ್ ಹಾಗೂ ಇಬ್ಬರು ಪಕ್ಷೇತರ ಶಾಸಕರು ಸದನಕ್ಕೆ ಹಾಜರಾಗಿರಲಿಲ್ಲ.
ಇನ್ನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕಾಂಗ್ರೆಸ್ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಆನಂದ್‍ಸಿಂಗ್, ಬಿ.ಸಿ.ಪಾಟೀಲ್, ಪ್ರತಾಪ್ ಗೌಡ ಪಾಟೀಲ್, ಎಂ.ಟಿ.ಬಿ.ನಾಗರಾಜ್, ಡಾ.ಸುಧಾಕರ್, ಶಿವರಾಮ್ ಹೆಬ್ಬಾರ್, ಎಸ್.ಟಿ.ಸೋಮೇಶಖರ್, ಬೈರತಿ ಬಸವರಾಜು, ಮುನಿರತ್ನ, ರೋಷನ್ ಬೇಗ್ ಹಾಗೂ ಜೆಡಿಎಸ್ ಶಾಸಕರಾದ ಹೆಚ್. ವಿಶ್ವನಾಥ್, ನಾರಾಯಣಗೌಡ ಹಾಗೂ ಕೆ. ಗೋಪಾಲಯ್ಯ ಅವರು ಕಲಾಪದಲ್ಲಿ ಭಾಗವಹಿಸಿಲ್ಲ.