ಬೆಂಗಳೂರು :ಕೋವಿಡ್ ಕಾರಣಕ್ಕಾಗಿ ಕಳೆದ ವರ್ಷ ಶಾಲೆಗಳು ನಡೆಯದಿದ್ದಾಗ ಮಧ್ಯಾಹ್ನದ ಬಿಸಿಯೂಟಕ್ಕೆ ಪರ್ಯಾಯವಾಗಿ ಮಕ್ಕಳಿಗೆ ಆಹಾರ ಧಾನ್ಯ ನೀಡಿದಂತೆ ಈ ಬಾರಿಯೂ ಲಾಕ್ ಡೌನ್ ಸಮಯದಲ್ಲಿ ಆಹಾರ ಧಾನ್ಯಗಳನ್ನು ವಿತರಿಸಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ಕೋವಿಡ್ ನಿರ್ವಹಣೆ ಹಾಗೂ ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಪಿಐಎಲ್ ಅರ್ಜಿಗಳ ವಿಚಾರಣೆ ನಡೆಸಿದ ಸಿಜೆ ಎ. ಎಸ್. ಓಕ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ಏಪ್ರಿಲ್ 14, 2021ರಿಂದ ಇಲ್ಲಿಯವರೆಗೆ ಶಾಲಾ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳನ್ನು ಒದಗಿಸಬೇಕು. ಈ ಕುರಿತಂತೆ ಕೈಗೊಂಡ ಕ್ರಮಗಳ ವರದಿಯನ್ನ ಮುಂದಿನ ವಿಚಾರಣೆ ವೇಳೆ ಸಲ್ಲಿಸಬೇಕು ಎಂದು ಆದೇಶಿಸಿದೆ.