ಬೆಂಗಳೂರು:ಗಣೇಶ ಚತುರ್ಥಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಎಲ್ಲಾರು ಹಬ್ಬದ ತಯಾರಿಯಲ್ಲಿ ತೊಡಗಿದ್ದಾರೆ. ಕೆಲವರು ಪ್ಲಾಸ್ಟಿಕ್ ಮತ್ತು ವೈಟ್ ಸಿಮೆಂಟ್ ಗಣೇಶನ ಮೂರ್ತಿಗಳನ್ನು ಮನೆಗೆ ತರಬಹುದು. ಇದು ಪರಿಸರಕ್ಕೆ ಮಾರಕವಾಗಿ ಪರಿಣಮಿಸಲಿದೆ. ಈ ಎಲ್ಲಾ ದೃಷ್ಟಿಯಿಂದ ಸಮಾಜ ಸೇವಕರೊಬ್ಬರು ಸಾರ್ವಜನಿಕರಿಗೆ ಉಚಿತವಾಗಿ 5 ಸಾವಿರ ಮಣ್ಣಿನಿಂದ ಮಾಡಲ್ಪಟ್ಟ ಗಣೇಶ ಮೂರ್ತಿಗಳನ್ನು ವಿತರಿಸಿದ್ದಾರೆ.
ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಸಚಿವ ಬೈರತಿ ಬಸವರಾಜ್ ಚಾಲನೆ ನೀಡಿದರು. ಬೆಂಗಳೂರಿನ ಕೆಆರ್ ಪುರಂ ಕ್ಷೇತ್ರದಲ್ಲಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರ ಮಾರ್ಗದರ್ಶನದಲ್ಲಿ, ರಾಮಮೂರ್ತಿನಗರ ವಾರ್ಡ್ನ ಬಿಜೆಪಿ ಮುಖಂಡ ದುಶ್ಯಂತ ರಾಜ್ ಮೂರ್ತಿಗಳನ್ನು ವಿತರಿಸಿದರು. ಅಷ್ಟೇ ಅಲ್ಲದೇ ಪರಿಸರ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಸಹ ಮೂಡಿಸಿದ್ದಾರೆ.