ಬೆಂಗಳೂರು:ಲಾಕ್ಡೌನ್ನಿಂದ ಸಂಕಷ್ಟದಲ್ಲಿರುವ ಬಡವರಿಗೆ ಮಹದೇವಪುರ ಕ್ಷೇತ್ರದ ಬಿದರಹಳ್ಳಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿದರಹಳ್ಳಿ ಪಂಚಾಯಿತಿ ಉಪಾಧ್ಯಕ್ಷ ರಾಜೇಶ್ ಹಾಗೂ ಬಿದರಹಳ್ಳಿ ಬ್ಲಾಕ್ ಅಧ್ಯಕ್ಷ ಎಂ.ಸಿ.ಬಿ. ಮುನಿರಾಜು ಅವರು ಸುಮಾರು ಮೂರು ಸಾವಿರಕ್ಕೂ ಹೆಚ್ಚು ಆಹಾರ ಸಾಮಗ್ರಿಗಳನ್ನು ವಿತರಿಸಿದರು.
ಕಾಂಗ್ರೆಸ್ನಿಂದ ಮಹದೇವಪುರ ಕ್ಷೇತ್ರದ ಬಿದರಹಳ್ಳಿ ಬ್ಲಾಕ್ನಲ್ಲಿ ಆಹಾರ ಸಾಮಗ್ರಿ ವಿತರಣೆ - D K Shivakumar kpcc president
ಮಹದೇವಪುರ ಕ್ಷೇತ್ರದ ಬಿದರಹಳ್ಳಿ ಬ್ಲಾಕ್ ಕಾಂಗ್ರೆಸ್ನಿಂದ ಬಡವರಿಗೆ ಆಹಾರ ಸಾಮಗ್ರಿ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಚಾಲನೆ ನೀಡಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರೇಷನ್ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇವರಿಗೆ ವಿಧಾನಪರಿಷತ್ ಮುಖ್ಯ ಸಚೇತಕ ನಾರಾಯಣಸ್ವಾಮಿ ಹಾಗೂ ಪಾಲಿಕೆ ಸದಸ್ಯ ಉದಯ್ ಕುಮಾರ್ ಸಾಥ್ ನೀಡಿದರು. ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಅವರ ಹುಟ್ಟುಹಬ್ಬದ ಸಲುವಾಗಿ ಕೇಕ್ ತರಿಸಿ ಕಟ್ ಮಾಡಿಸಿ ಅವರಿಗೆ ತಿನ್ನಿಸುವ ಮೂಲಕ ಕಾಂಗ್ರೆಸ್ ಮುಖಂಡರು ಶುಭ ಕೋರಿದರು.
ನಂತರ ಮಾತನಾಡಿದ ಡಿಕೆಶಿ, ಸರ್ಕಾರ ನೀಡುವ ರೇಷನ್ ಕಿಟ್ಗಳಲ್ಲಿ ಸ್ಥಳೀಯ ಜನಪ್ರತಿನಿದಿಗಳು ತಮ್ಮ ಭಾವ ಚಿತ್ರಗಳನ್ನು ಅಂಟಿಸಿ ರೇಷನ್ ಕಿಟ್ ಹಂಚಿದ್ದನ್ನು ನೋಡಿದ್ದೇವೆ. ನಿಸ್ವಾರ್ಥ ಸೇವೆ ಇರುವ ಕಡೆಯಷ್ಟೇ ನಾನು ಹೋಗಿ ರೇಷನ್ ಕಿಟ್ ವಿತರಣೆ ಮಾಡುತ್ತೇನೆ. ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ನಿಸ್ವಾರ್ಥ ಸೇವೆಯಿಂದ ಬಡವರಿಗೆ, ನಿರ್ಗತಿಕರಿಗೆ, ವಲಸೆ ಕಾರ್ಮಿಕರಿಗೆ ರೇಷನ್ ವಿತರಣೆ ಮಾಡುವ ಕೆಲಸ ಮಾಡಿದ್ದಾರೆ ಅವರಿಗೆ ಅಭಿನಂದನೆ ತಿಳಿಸುತ್ತೇನೆ ಎಂದರು.