ಬೆಂಗಳೂರು: ಬಿಬಿಎಂಪಿ ವಾರ್ಡ್ ನಂ.4ರ ವ್ಯಾಪ್ತಿಯ ಚಿಕ್ಕಬೊಮ್ಮಸಂದ್ರ, ಅಲ್ಲಾಳಸಂದ್ರ, ಜ್ಯುಡಿಶಿಯಲ್ ಲೇಔಟ್ ವ್ಯಾಪ್ತಿಯಲ್ಲಿ ಗುಡಿಸಲು ನಿರ್ಮಿಸಿಕೊಂಡು ವಾಸಿಸುತ್ತಿರುವ ವಲಸೆ ಕಾರ್ಮಿಕರಿಗೆ ಸೆಂಟ್ಯಂ ಎಲೆಕ್ಟ್ರಾನಿಕ್ ಸಂಸ್ಥೆಯಿಂದ ದಿನಸಿ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.
ಸೆಂಟ್ಯಂ ಎಲೆಕ್ಟ್ರಾನಿಕ್ ಸಂಸ್ಥೆಯಿಂದ ಕಾರ್ಮಿಕರಿಗೆ ದಿನಸಿ ವಿತರಣೆ
ಲಾಕ್ಡೌನ್ ಹಿನ್ನಲೆ ವಲಸೆ ಬಂದಿರುವ ದಿನಗೂಲಿ ನೌಕರರು ಹಾಗೂ ಕಟ್ಟಡ ಕಾರ್ಮಿಕರಿಗೆ ದಿನದ ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಅವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಸೆಂಟ್ಯಂ ಎಲೆಕ್ಟ್ರಾನಿಕ್ ಸಂಸ್ಥೆಯಿಂದ ದಿನಸಿ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.
ಕೋವಿಡ್-19 ಹರಡದಂತೆ ತಡೆಗಟ್ಟುವ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ಡೌನ್ ಘೋಷಿಸಿರುವುದರಿಂದ ಉತ್ತರ ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಂದ ವಲಸೆ ಬಂದಿರುವ ದಿನಗೂಲಿ ನೌಕರರು ಹಾಗೂ ಕಟ್ಟಡ ಕಾರ್ಮಿಕರಿಗೆ ದಿನದ ಊಟಕ್ಕೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಕಾರ್ಮಿಕರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಇದೇ ವೇಳೆ ಯಲಹಂಕ ಎಸಿಪಿ ಶ್ರೀನಿವಾಸ್ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ಅನಿಲ್ ಕುಮಾರ್, ಯಲಹಂಕ ಉಪನಗರ ಪೊಲೀಸರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಸ್ವಚ್ಛತೆ ಕಾಪಾಡಿಕೊಂಡು ವೈರಸ್ ಹರಡುವುದನ್ನು ತಡೆಗಟ್ಟಬೇಕು ಎಂದು ಜಾಗೃತಿ ಮೂಡಿಸಿದರು.