ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ- ನಿಮ್ಹಾನ್ಸ್ (NIMHANS)ನಲ್ಲಿ ಜಿಲ್ಲಾ ಕೋ ಆರ್ಡಿನೇಟರ್ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 32 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಕಾತಿಗೆ ಮಾಡಲಾಗುವುದು. ಅಭ್ಯರ್ಥಿಗಳು ಕಾರ್ಯಕ್ಷಮತೆ ಆಧಾರದ ಮೇಲೆ ಈ ಹುದ್ದೆ ವಿಸ್ತರಣೆ ನಡೆಸಲಾಗುವುದು. ಈ ಹುದ್ದೆಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಹುದ್ದೆ ವಿವರ: ನಿಮ್ಹಾನ್ಸ್ನಲ್ಲಿ ಕರ್ನಾಟಕ ಸರ್ಕಾರ ಅನುದಾನಿತ ಯೋಜನೆ ಕರ್ನಾಟಕ ಬ್ರೈನ್ ಹೆಲ್ತ್ ಇನ್ಷಿಯೆಟಿವ್ ಯೋಜನೆಗೆ 32 ಜಿಲ್ಲಾ ಕೋ ಆರ್ಡಿನೇಟರ್ ಹುದ್ದೆ ಭರ್ತಿ ನಡೆಸಲಾಗುವುದು
ವಿದ್ಯಾರ್ಹತೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಜೀವ ವಿಜ್ಞಾನ, ಸಾರ್ವಜನಿಕ ಆರೋಗ್ಯ, ಸಮಾಜಶಾಸ್ತ್ರ, ಗ್ರಾಮೀಣಾಭಿವೃದ್ದಿ, ಅರ್ಥಶಾಸ್ತ್ರ, ಮಾನವ ಸಂಪನ್ಮೂಲ, ಸೋಶಿಯಲ್ ವರ್ಕ್, ಸೈಕಾಲಜಿಲ್ಲಿ ಮೊದಲ ದರ್ಜೆಯಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣ ಮಾಡಿರಬೇಕು.
ಕನ್ನಡವನ್ನು ಚೆನ್ನಾಗಿ ಓದಲು ಮತ್ತು ಬರೆಯಲು, ಮಾತನಾಡುವ ಸಾಮರ್ಥ್ಯವನ್ನು ಹೊಂದಿರಬೇಕು. ಈಗಾಗಲೇ ಸಾರ್ವಜನಿಕ ಆರೋಗ್ಯ ಕಾರ್ಯಕ್ರಮದಲ್ಲಿ ಹುದ್ದೆ ನಿರ್ವಹಣೆ ಮಾಡಿರುವ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ವೇತನ:ಈ ಹುದ್ದೆಗೆ ಮಾಸಿಕ 35 ಸಾವಿರ ವೇತನವನ್ನು ನಿಗದಿಪಡಿಸಲಾಗಿದೆ.
ವಯೋಮಿತಿ: ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಿತಿ 45 ವರ್ಷ ಆಗಿದೆ.