ಬೆಂಗಳೂರು : ರೈತರ ಸಮಸ್ಯೆ ಪರಿಹರಿಸಲು ವಾರಕ್ಕೊಂದು ಸಭೆ ನಡೆಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವಾರದಲ್ಲಿ ಕನಿಷ್ಠ ಒಂದು ದಿನ ಸಭೆ ನಡೆಸುವಂತೆ ಕೃಷಿ ಇಲಾಖೆ ನಿರ್ದೇಶಕ ಶ್ರೀನಿವಾಸ್ ಆದೇಶಿಸಿದ್ದಾರೆ.
ರೈತರ ಸಮಸ್ಯೆ ಪರಿಹರಿಸಲು ವಾರಕ್ಕೊಂದು ಸಭೆ ನಡೆಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಿಗೆ ಸೂಚನೆ - District Joint Director of Agriculture is instructed to hold a weekly meeting to resolve the farmers' problem
ಕೊರೊನಾ ಕರ್ಫ್ಯೂ ಸಮಯದಲ್ಲಿ ರೈತರ ಸಮಸ್ಯೆ ಪರಿಹರಿಸಲು ವಾರಕ್ಕೊಂದು ಸಭೆ ನಡೆಸುವಂತೆ ಕೃಷಿ ಅಧಿಕಾರಿಗಳಿಗೆ ಕೃಷಿ ಇಲಾಖೆ ನಿರ್ದೇಶಕ ಶ್ರೀನಿವಾಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕೋವಿಡ್ -19 ರ ಎರಡನೇ ಅಲೆ ನಿಯಂತ್ರಣಕ್ಕೆ ರಾಜ್ಯ ಸರ್ಕಾರ 14 ದಿನ ಕರ್ಫ್ಯೂ ಹೇರಿದ್ದು, ಈ ಸಂದರ್ಭದಲ್ಲಿ ರಾಜ್ಯದ ರೈತರ ಸಮಸ್ಯೆಗಳಿಗೆ ಸ್ಪಂದಿಸಲು ಅಗ್ರಿವಾರ್ ರೂಮ್ ಅನ್ನು ಸೇತುವೆವಂತೆ ಕಾರ್ಯನಿರ್ವಹಿಸಲು ಆರಂಭಿಸಲಾಗಿದೆ. ಸರ್ಕಾರದ ಕರ್ಫ್ಯೂ ಮಾರ್ಗಸೂಚಿಯಲ್ಲಿ ಕೃಷಿ ಹಾಗೂ ಕೃಷಿ ಸಂಬಂಧಿತ ಚಟುವಟಿಕೆಗಳಿಗೆ ( outside Containment Zone ) ವಿನಾಯಿತಿ ನೀಡಲಾಗಿದೆ .
ಕೃಷಿ ಹಾಗೂ ಕೃಷಿ ಸಂಬಂಧಿತ ಕ್ಷೇತ್ರಗಳಿಗೆ ಸಂಬಂಧಪಟ್ಟಂತೆ ಜಿಲ್ಲೆಗಳಲ್ಲಿ ರೈತರು ಈ ಸಂಕಷ್ಟದ ಸಮಯದಲ್ಲಿ ಎದುರಿಸಬಹುದಾದ ಗೊಂದಲ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಲಹೆ ಮಾರ್ಗದರ್ಶನ ನೀಡಬೇಕು. ರೈತರು ಕೋವಿಡ್ -19 ನಿಂದ ಕೃಷಿ ಚಟುವಟಿಕೆಗಳ ಮೇಲೆ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಕೇಳಬಹುದಾದ ಪ್ರಶ್ನೆಗಳಿಗೆ ಸೂಕ್ತ ಸಲಹೆ ನೀಡಲು ಸೂಚಿಸಿದ್ದಾರೆ.