ಬೆಂಗಳೂರು:ಲಾಕ್ ಡೌನ್ ಇರುವ ಸಂದಿಗ್ಧ ಪರಿಸ್ಥಿತಿಯಲ್ಲ ರಾಜ್ಯದಲ್ಲಿ ರೈತರ ಸ್ಥಿತಿಗತಿಗಳೇನು ಎಂಬುದನ್ನು ಅವಲೋಕಿಸಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವತಃ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್ 6 ರಿಂದ 11 ರವರೆಗೆ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದು, ಆಯಾ ಜಿಲ್ಲಾ ಕಚೇರಿಗಳಲ್ಲಿ ಜಿಲ್ಲಾಮಟ್ಟದ ಸಭೆಗಳನ್ನು ನಡೆಸಲಿದ್ದಾರೆ.
ಏಪ್ರಿಲ್ 6ರ ಸೋಮವಾರದಂದು ಧಾರವಾಡ, ಬೆಳಗಾವಿ, ಬಾಗಲಕೋಟೆ, 7 ರಂದು ಬಿಜಾಪುರ, ಕಲಬುರಗಿ, ಬೀದರ್, 8 ರಂದು ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, 9 ರಂದು ಗದಗ, ಹಾವೇರಿ, 10ರಂದು ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗು 11 ರಂದು ಮೈಸೂರು, ಚಾಮರಾಜನಗರ, ಮಂಡ್ಯ,ರಾಮನಗರ ಜಿಲ್ಲೆಗಳಿಗೆ ಪ್ರವಾಸ ಕೈಗೊಳ್ಳಲಿದ್ದಾರೆ.
ರೈತರ ಸ್ಥಿತಿಗತಿ ಅವಲೋಕನ: ನಾಳೆಯಿಂದ ಕೃಷಿ ಸಚಿವ ಬಿ.ಸಿ.ಪಾಟೀಲ್ ಜಿಲ್ಲಾ ಪ್ರವಾಸ
ಸಭೆಯಲ್ಲಿ ರೈತರು, ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ, ಬೀಜ ಗೊಬ್ಬರಗಳ ಸರಬರಾಜು ಹಾಗೂ ಉಳಿದ ಕೃಷಿ ಚಟುವಟಿಕೆಗಳ ಕುರಿತು ಚರ್ಚೆ ನಡೆಸಲಿದ್ದು ರೈತರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಿದ್ದಾರೆ.
ಕೃಷಿ ಸಚಿವ ಬಿ.ಸಿ.ಪಾಟೀಲ್
ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು, ಕೃಷಿ, ತೋಟಗಾರಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೇರಿದಂತೆ ಕೃಷಿಚಡುವಡಿಕೆಗೆ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಜೊತೆ ಸಭೆ ನಡೆಸಲಿದ್ದಾರೆ.
ಸಭೆಯಲ್ಲಿ ರೈತರು,ಕೃಷಿ ಉತ್ಪನ್ನಗಳ ಸರಕು ಸಾಗಾಣಿಕೆ, ಬೀಜ ಗೊಬ್ಬರಗಳ ಸರಬರಾಜು ಹಾಗೂ ಉಳಿದಂತಹ ಕೃಷಿ ಚಟುವಟಿಕೆಗಳ ಕುರಿತು ಚರ್ಚೆ ನಡೆಸಲಿದ್ದು ಕೃಷಿ ಚಟುವಟಿಕೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಿದ್ದಾರೆ.